ನ್ಯೂಜಿಲೆಂಡ್ ನಲ್ಲಿ ಪ್ರಬಲ ಭೂಕಂಪನ
ಪ್ರವಾಸಿಗರ ನಾಡು ನ್ಯೂಜಿಲೆಂಡ್ ನಲ್ಲಿ ಸೋಮವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.

ವೆಲ್ಲಿಂಗ್ಟನ್: ಪ್ರವಾಸಿಗರ ನಾಡು ನ್ಯೂಜಿಲೆಂಡ್ ನಲ್ಲಿ ಸೋಮವಾರ ಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.
ದ್ವೀಪರಾಷ್ಟ್ರ ನ್ಯೂಜಿಲೆಂಡ್ ನ ಭೂಕಂಪ ನಿಗಾ ಸಂಸ್ಥೆ ಜಿಯೊನೆಟ್ ವರದಿಯ ಪ್ರಕಾರ ವನಕ ಪಟ್ಟಣದ ವಾಯವ್ಯದ 30 ಕಿ.ಮೀ. ದೂರದಲ್ಲಿ ಭೂಕಂಪನ ಕೇಂದ್ರಬಿಂದು ದಾಖಲಾಗಿದೆ ಎಂದು ನ್ಯೂಜಿಲೆಂಡ್ ಹೆರಾಲ್ಡ್ ವರದಿ ಮಾಡಿದೆ. ತೀವ್ರ ಸ್ವರೂಪದ ಭೂಕಂಪನ ಇದಾಗಿದ್ದು, ಸಾವು-ನೋವಿನ ಕುರಿತು ವರದಿಯಾಗಿಲ್ಲ. ಆದರೆ ಉತ್ತರ ದ್ವೀಪದ ದಕ್ಷಿಣದಲ್ಲಿರುವ ನ್ಯೂಜಿಲೆಂಡ್ ರಾಜಧಾನಿ ವೆಲ್ಲಿಂಗ್ಟನ್ನಲ್ಲೂ ಭೂಕಂಪನದ ಪರಿಣಾಮ ಭೂಮಿ ನಡುಗಿದ ಅನುಭವವಾಗಿದೆ ಎಂದು ತಿಳಿದುಬಂದಿದೆ.
ರಾತ್ರಿ ಸುಮಾರು 2.29ರ ಸಮಯದಲ್ಲಿ ಸುಮಾರು 5 ಸೆಕೆಂಡುಗಳ ಕಾಲ ಭೂಮಿ ನಡುಗಿದ್ದು, ಇದಾದ ಬಳಿಕ ಇದೇ ವನಕ ಪ್ರದೇಶದಲ್ಲಿ ಸುಮಾರು 10 ನಿಮಿಷಗಳ ಕಾಲ ಕಡಿಮೆ ಅಂದರೆ 3.4 ತೀವ್ರತೆಯ ಸರಣಿ ಭೂಕಂಪನಗಳು ಸಂಭವಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


