ಮೋದಿ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ ದುರ್ಬಲಗೊಳಿಸುತ್ತಿದೆ: ಸೋನಿಯಾ
ಎನ್‌ಡಿಎ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ...

ನವದೆಹಲಿ: ಎನ್‌ಡಿಎ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಅವರು ಎಲ್ಲಾ ಅಧಿಕಾರ ತಮ್ಮ ಬಳಿಯೇ ಇರಬೇಕು ಎಂದು ಬಯಸುತ್ತಾರೆ. ಹೀಗಾಗಿಯೇ ಅವರು ಆರ್‌ಟಿಐ ಕಾಯ್ದೆಯನ್ನು ರದ್ದುಗೊಳಿಸಲು ಮುಂದಾಗಿದ್ದಾರೆ ಎಂದರು.
ಪಾರದರ್ಶಕತೆ ವಿಷಯದಲ್ಲಿ ನರೇಂದ್ರ ಮೋದಿ ಅವರು ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದು, ಲೋಕಪಾಲ, ಮುಖ್ಯ ಮಾಹಿತಿ ಆಯುಕ್ತರ ಹಾಗೂ ಕೇಂದ್ರೀಯ ಜಾಗೃತದಳದ ಮುಖ್ಯಸ್ಥರ ಹುದ್ದೆಗಳ ನೇಮಕಗಳನ್ನು ಉದ್ದೇಶಪೂರ್ವಕವಾಗಿಯೇ ಖಾಲಿ ಉಳಿಸಿದ್ದಾರೆ ಎಂದರು.
ಎನ್‌ಡಿಎ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಿತ್ತಿದೆ ಎಂದು ಆರೋಪಿಸಿದ ಸೋನಿಯಾ ಮುಖ್ಯ ಮಾಹಿತಿ ಆಯಕ್ತರ ಸ್ಥಾನ ಕಳೆದ 8 ತಿಂಗಳಿನಿಂದ ಖಾಲಿ ಬಿದ್ದಿದೆ. ಮೂರು ಮಾಹಿತಿ ಆಯಕ್ತರ ಸ್ಥಾನಗಳು ಕಳೆದ ಒಂದು ವರ್ಷದಿಂದ ಭರ್ತಿಯಾಗದೆ ಉಳಿದಿವೆ. ಇದರಿಂದಾಗಿ 39 ಸಾವಿರ ಪ್ರಕರಣಗಳು ವಿಲೇವಾರಿಗೆ ಕಾದು ಕುಳಿತಿವೆ ಎಂದು ಅಂಕಿ–ಅಂಶ ಸಮೇತ ಸದನಕ್ಕೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


