ಕೂದಲೆಳೆ ಅಂತರದಲ್ಲಿ ಪಾರಾದ ಡೆಲ್ಲಿ ಡೇರ್ ಡೆವಿಲ್ಸ್ ತಂಡ
ಮುಂಬೈನಿಂದ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಹೊತ್ತ ಇಂಡಿಗೋ ವಿಮಾನ ಛತ್ತೀಸ್ ಗಡ್ ರಾಯ್ ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ...

ಮುಂಬೈನಿಂದ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಹೊತ್ತ ಇಂಡಿಗೋ ವಿಮಾನ ಛತ್ತೀಸ್ ಗಡ್ ರಾಯ್ ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗುವ ಸಾಧ್ಯತೆ ಇದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದೆ.
ಡೆಲ್ಲಿ ಡೇರ್ ಡೆವಿಲ್ಸ್ ತಂಡ ಇದ್ದ ಇಂಡಿಗೋ ವಿಮಾನ ರನ್ ವೇಯಲ್ಲಿ ಇಳಿಯುವ ಸಂದರ್ಭದಲ್ಲಿ ಕೊಲ್ಕತ್ತಾ-ರಾಯ್‍ಪುರ್ ವಿಮಾನ ರನ್‍ವೇನಲ್ಲಿ ನಿಂತಿತ್ತು. ಇದನ್ನು ಗಮನಿಸದ ಇಂಡಿಗೋ ವಿಮಾನದ ಪೈಲೆಟ್ ವಿಮಾನ ರನ್ ವೇಯಲ್ಲಿ ಇಳಿಸಲು ಮುಂದಾಗಿದ್ದು ತಕ್ಷಣ ಇದನ್ನು ಗಮನಿಸಿದ ಹಿರಿಯ ಪೈಲೆಟ್‍ಗಳು ವಿಮಾನವನ್ನು ಸ್ವಲ್ಪ ದೂರದಲ್ಲಿ ಸುರಕ್ಷಿತವಾಗಿ ರನ್‍ವೇಗೆ ಇಳಿಸಿ ಆಗಲಿರುವ ಭಾರೀ ದುರಂತವನ್ನು ತಪ್ಪಿಸಿದ್ದಾರೆ.
ಮೇ 09 ಮತ್ತು 12ರಂದು ರಾಯ್‍ಪುರ್‍ನ ಶಾಹೀದ್ ವೀರನಾರಾಯಣ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ತಮ್ಮ ಮುಂದಿನ ಐಪಿಎಲ್ ಪಂದ್ಯಕ್ಕಾಗಿ ಆಗಮಿಸಿದ್ದರು ಎನ್ನಲಾಗಿದೆ. ಹಿರಿಯ ಪೈಲೆಟ್‍ಗಳ ಕರ್ತವ್ಯ ಪ್ರಜ್ಞೆಯಿಂದ ಈ ವಿಮಾನ ದುರಂತ ತಪ್ಪಿದ್ದು, ಡೇರ್ ಡೆವಿಲ್ಸ್ ತಂಡದ ಸದಸ್ಯರು ಬಚಾವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


