ಕೆರೆ ಒತ್ತುವರಿಗೆ ಕೋಟಿ ದಂಡ
ಬೆಳ್ಳಂದೂರು ಮತ್ತು ಆಗರ ಕೆರೆಗಳ ನಡುವೆ ಅಕ್ರಮವಾಗಿ ಮತ್ತು ನಿಯಮ ಮೀರಿ ಕಟ್ಟಡ ನಿರ್ಮಿಸಿ, ರಾಜಕಾಲುವೆ ಸೇರಿದಂತೆ ಕೆರೆಗಳ ಜಲಮೂಲಗಳಿಗೆ ಹಾನಿ ಮಾಡಿರುವ ಮಂತ್ರಿ ಟೆಕ್ ಝೋನ್ ಪ್ರೈವೇಟ್ ಲಿಮಿಟೆಡ್‍ಗೆ ರು. 117.35 ಕೋಟಿ ಮತ್ತು ಕೋರ್ ಮೈಂಡ್ ಸಾಫ್ಟ್ ವೇರ್ ಅಂಡ್...

ನವದೆಹಲಿ: ಬೆಳ್ಳಂದೂರು ಮತ್ತು ಆಗರ ಕೆರೆಗಳ ನಡುವೆ ಅಕ್ರಮವಾಗಿ ಮತ್ತು ನಿಯಮ ಮೀರಿ ಕಟ್ಟಡ ನಿರ್ಮಿಸಿ, ರಾಜಕಾಲುವೆ ಸೇರಿದಂತೆ ಕೆರೆಗಳ ಜಲಮೂಲಗಳಿಗೆ ಹಾನಿ ಮಾಡಿರುವ ಮಂತ್ರಿ ಟೆಕ್ ಝೋನ್ ಪ್ರೈವೇಟ್ ಲಿಮಿಟೆಡ್‍ಗೆ ರು. 117.35 ಕೋಟಿ ಮತ್ತು ಕೋರ್ ಮೈಂಡ್ ಸಾಫ್ಟ್ ವೇರ್ ಅಂಡ್ ಸರ್ವೀಸ್ ಪ್ರೈವೇಟ್ ಲಿಮಿಟೆಡ್‍ಗೆ ರು.22.5 ಕೋಟಿ ದಂಡ ವಿಧಿಸಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶ ನೀಡಿದೆ.
ದಂಡದ ಮೊತ್ತವನ್ನು ಈ ಸಂಸ್ಥೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪಾವತಿಸಬೇಕು. ಮಂಡಳಿಯು ಈ ಮೊತ್ತ ಬಳಸಿ ಎರಡೂ ಕಂಪನಿಗಳು ಉಂಟು ಮಾಡಿರುವ ಕೆರೆಗಳ ಜಲಮೂಲ ಮತ್ತಿತರ ಪರಿಸರ ಹಾನಿಯನ್ನು ನಿವಾರಿಸಿ, ಪರಿಸರ ಪುನಶ್ಚೇತನಗೊಳಿಸಬೇಕು ಎಂದು ಆದೇಶಿಸಿದೆ.
ಇದಷ್ಟೇ ಅಲ್ಲ, ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿ ಬೆಂಗಳೂರಿನ ಇತರ ಕೆರೆಗಳ ಒತ್ತುವರಿ ಬಗ್ಗೆಯೂ ಅಧ್ಯಯನ ಮಾಡಿ, ಅಲ್ಲಿನ ಜಲ ಮೂಲದ ಬಗ್ಗೆ ವರದಿ ನೀಡುವಂತೆಯೂ ಪೀಠ ಸೂಚನೆ ನೀಡಿದೆ.
ರಾಜ್ಯಸಭೆಯಲ್ಲಿ ಪ್ರಸ್ತಾಪ
- ಕಾಕತಾಳೀಯವೆಂಬಂತೆ, ರಾಜ್ಯಸಭೆಯಲ್ಲಿ ರಾಜೀವ್ ಚಂದ್ರಶೇಖರ್ ಬೆಂಗಳೂರಿನ ಕೆರೆಗಳ ಅಕ್ರಮ ಒತ್ತುವರಿ ಬಗ್ಗೆ ಗಮನ ಸೆಳೆದರು. ನಗರದ ಕೆರೆಗಳಲ್ಲಿ ಮನೆ ಕಟ್ಟಲು ಒಪ್ಪಿಗೆ ಕೊಟ್ಟವರ
- ಸಂಬಂಧ ಪರಿಸರ ಸಚಿವಾಲಯ ಲೆಕ್ಕ ಪರಿಶೋಧನೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಈ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


