ದೇಶ

ಫಿರ್ ಏಕ್ ಬಾರ್, ಕ್ಯಾಮರಾನ್ ಸರ್ಕಾರ್, ಎಂದ ಪ್ರಧಾನಿ ಮೋದಿ

ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರಾನ್ ನೇತೃತ್ವದ ಆಡಳಿತಾರೂಢ ಕರ್ನ್ಸವೇಟಿವ್ ಪಕ್ಷ ಚುನಾವಣೆಯಲ್ಲಿ ಜಯಭೇರಿ ಗಳಿಸಿದ್ದು...

ಫಿರ್ ಏಕ್ ಬಾರ್, ಕ್ಯಾಮರಾನ್ ಸರ್ಕಾರ್, ಎಂದ ಪ್ರಧಾನಿ ಮೋದಿ
ಪ್ರಧಾನಿಗಳಾದ ಡೇವಿಡ್ ಕ್ಯಾಮರಾನ್, ನರೇಂದ್ರಮೋದಿ
Published On :

ನವದೆಹಲಿ: ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರಾನ್ ನೇತೃತ್ವದ ಆಡಳಿತಾರೂಢ ಕರ್ನ್ಸವೇಟಿವ್ ಪಕ್ಷ ಚುನಾವಣೆಯಲ್ಲಿ ಜಯಭೇರಿ ಗಳಿಸಿದ್ದು, ಬ್ರಿಟನ್ ಪ್ರಧಾನಿಯಾಗಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲಿರುವ ಕ್ಯಾಮರಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.

ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ಶುಭಾಶಯ ಡೇವಿಡ್ ಕ್ಯಾಮರಾನ್, ಫಿರ್ ಏಕ್ ಬಾರ್, ಕ್ಯಾಮರಾನ್ ಸರ್ಕಾರ್ ಎಂದು ಬರೆದುಕೊಂಡಿದ್ದಾರೆ.

ಬ್ರಿಟನ್ ಸಂಸತ್ ನ 650 ಸ್ಥಾನಗಳಿಗೆ ಪೈಕಿ ಕರ್ನ್ಸವೇಟಿವ್ ಪಕ್ಷ 329 ಸ್ಥಾನಗಳನ್ನು ಪಡೆಯುತ್ತಿದ್ದಂತೆ ಮೋದಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಬ್ ಕಿ ಬಾರ್ ಮೋದಿ ಸರ್ಕಾರ್ ಎಂಬ ಘೋಷ ವಾಕ್ಯದೊಂದಿಗೆ ಬರ್ಜರಿ ಬಹುಮತ ಪಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.