ನೇಪಾಳ, ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಮತ್ತೆ ಭೂಕಂಪ
ಭೀಕರ ಭೂಕಂಪದಿಂದ ತತ್ತರಿಸಿದ್ದ ನೇಪಾಳದಲ್ಲಿ ಮಂಗಳವಾರ ಮತ್ತೆ ಭೂಕಂಪ ಸಂಭವಿಸಿದ್ದು, ರಾಷ್ಟ್ರರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ...

ನವದೆಹಲಿ: ಭೀಕರ ಭೂಕಂಪದಿಂದ ತತ್ತರಿಸಿದ್ದ ನೇಪಾಳದಲ್ಲಿ ಮಂಗಳವಾರ ಮತ್ತೆ ಭೂಕಂಪ ಸಂಭವಿಸಿದ್ದು, ರಾಷ್ಟ್ರರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಭೂಮಿ ಕಂಪಿಸಿದೆ.
ಇಂದು ಮಧ್ಯಾಹ್ನ 12.30ರ ಸುಮಾರಿಗೆ ದೆಹಲಿ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಅಸ್ಸಾಂ, ಛತ್ತೀಸ್‌ಗಡ, ಬಿಹಾರ, ಒಡಿಶಾ ಹಾಗೂ ಚಂಡೀಗಢದಲ್ಲಿ ಸುಮಾರು 60 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಕಟ್ಟಡಗಳಿಂದ ಹೊರಗೋಡಿ ಬಂದಿದ್ದಾರೆ.
ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದ್ದು, ಒಂದು ನೇಪಾಳದ ಕಠ್ಮಂಡು ನಗರದಿಂದ ಸುಮಾರು 83 ಕಿ.ಮೀ. ದೂರದ ಕೊಡಾರಿಯಲ್ಲಿ ಹಾಗೂ ಮತ್ತೊಂದು ಅಫ್ಘಾನಿಸ್ತಾನದಲ್ಲಿ. ರಿಕ್ಟರ್ ಮಾಪಕದಲ್ಲಿ ನೇಪಾಳದಲ್ಲಿ 7.2ರಷ್ಟು ಹಾಗೂ ಅಪ್ಘಾನಿಸ್ತಾನದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಹಾಗೂ ಕೋಲ್ಕತಾದಲ್ಲಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


