ಎಎಂಯು ಚುನಾವಣೆಗೆ ಸ್ಪರ್ಧಿಸಿದ್ದ ಮೊದಲ ಮಹಿಳಾ ಅಭ್ಯರ್ಥಿ ಅನುಮಾನಾಸ್ಪದ ಸಾವು
ಅಲಿಗರ್ ಮುಸ್ಲಿಮ್ ವಿಶ್ವವಿದ್ಯಾಲಯ(ಎಎಂಯು)ದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದ ಮೊದಲ ಮಹಿಳಾ ಅಭ್ಯರ್ಥಿ ಅನುಮಾನಾಸ್ಪದ ರೀತಿಯಲ್ಲಿ....

ಲಖನೌ: ಅಲಿಗರ್ ಮುಸ್ಲಿಮ್ ವಿಶ್ವವಿದ್ಯಾಲಯ(ಎಎಂಯು)ದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದ ಮೊದಲ ಮಹಿಳಾ ಅಭ್ಯರ್ಥಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದ ಅಸ್ಮಾ ಜಾವೇದ್(28) ಅವರ ಮೃತದೇಹ ಬುಧವಾರ ಪತ್ತೆಯಾಗಿದ್ದರೂ, ಮೃತಪಟ್ಟು ಹಲವು ದಿನಗಳೇ ಕಳೆದಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಸ್ಮಾ ಜಾವೇದ್ ನಿಧನದ ಬಗ್ಗೆ ಪ್ರತಿಕ್ರಿಯಿಸಿರುವ ಆಕೆಯ ಪೊಷಕರು, ತಮ್ಮ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ಅರೊಪಿಸಿದ್ದಾರೆ. ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದರಿಂದ ಅಸ್ಮಾ ಜಾವೇದ್ ಹತ್ಯೆಗೀಡಾಗಿದ್ದಾರೆ ಎಂದು ಪೊಷಕರು ಹೇಳಿಕೆ ನೀಡಿದ್ದಾರೆ.
ಮೇ.9ರಿಂದ ಅಸ್ಮಾ ಜಾವೇದ್ ಕುಟುಂಬದವರೊಂದಿಗೆ ಸಂಪರ್ಕದಲ್ಲಿರಲಿಲ್ಲ. ಈ ಹಿನ್ನೆಲೆಯಲ್ಲಿ, ಆಕೆಯನ್ನು ಹುಡುಕಲು ಲಖನೌಗೆ ಆಗಮಿಸಿದ್ದೆ, ಆದರೆ ಅಸ್ಮಾ ಜಾವೇದ್ ತನ್ನ ಅಪಾರ್ಟ್‌ಮೆಂಟ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂಬುದರಲ್ಲಿ ಸಂಶಯವಿಲ್ಲ ಎಂದು ಅಸ್ಮಾ ಜಾವೇದ್ ಸಹೊದರ ಸಲ್ಮಾನ್ ಹೇಳಿದ್ದಾರೆ.
ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಅಸ್ಮಾ ಜಾವೇದ್, ಅಲಿಗರ್ ಮುಸ್ಲಿಮ್ ವಿಶ್ವವಿದ್ಯಾಲಯದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು. ತಮ್ಮ ಪತಿಯಿಂದ ದೂರವಾಗಿದ್ದ ಕಾರಣ ಅಸ್ಮಾ ಜಾವೇದ್, ಮಾನಸಿಕವಾಗಿ ನೊಂದಿದ್ದರು ಎಂಬ ಅಂಶವೂ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.
ಅಪಾರ್ಟ್‌ಮೆಂಟ್‌ನ ಬಾಗಿಲು ಹೊರ ಭಾಗದಿಂದ ಲಾಕ್‌ಆಗಿದ್ದ ಕಾರಣ ಅಸ್ಮಾ ಜಾವೇದ್ ಅವರನ್ನು ಕೊಲೆ ಮಾಡಲಾಗಿದೆ ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


