ಅಧಿಕಾರ ವಹಿಸಿಕೊಳ್ಳದಂತೆ ಹಂಗಾಮಿ ಮುಖ್ಯ ಕಾರ್ಯದರ್ಶಿಗೆ ಕೇಜ್ರಿವಾಲ್ ಸೂಚನೆ
ದೆಹಲಿಯ ಹಂಗಾಮಿ ಮುಖ್ಯ ಕಾರ್ಯದರ್ಶಿ ಹುದ್ದೆ ನೇಮಕಾತಿ ವಿಷಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್...

ನವದೆಹಲಿ: ದೆಹಲಿಯ ಹಂಗಾಮಿ ಮುಖ್ಯ ಕಾರ್ಯದರ್ಶಿ ಹುದ್ದೆ ನೇಮಕಾತಿ ವಿಷಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಕಾಳಗ ತಾರಕಕ್ಕೇರಿದ್ದು, ಹಂಗಾಮಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಶಕುಂತಲಾ ಗ್ಯಾಮ್ಲಿನ್ ಅವರಿಗೆ ಅಧಿಕಾರ ವಹಿಸಿಕೊಳ್ಳದಂತೆ ದೆಹಲಿ ಸಿಎಂ ಸೂಚಿಸಿದ್ದಾರೆ.
ಈ ಸಂಬಂಧ ಗ್ಯಾಮ್ಲಿನ್ ಅವರಿಗೆ ಬರೆದ ಪತ್ರದಲ್ಲಿ, ನಿಮ್ಮ ನೇಮಕ ಅಸಂವಿಧಾನಕವಾಗಿದ್ದು, ಅಧಿಕಾರ ವಹಿಸಿಕೊಳ್ಳದಂತೆ ಕೇಜ್ರಿವಾಲ್ ಅವರು ಸೂಚಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆ ಕೆ ಶರ್ಮ, ಈ ಅತ್ಯುನ್ನತ ಅಧಿಕಾರಶಾಹಿ ಹುದ್ದೆಯನ್ನು ತೊರೆದ ಮೇಲೆ ಅವರ ನಂತರದ ಹಿರಿಯ ಅಧಿಕಾರಿ ಗ್ಯಾಮ್ಲಿನ್ ಅವರನ್ನು ಜಂಗ್ ನೇಮಕ ಮಾಡಿದ್ದರು. ಇದು ದೆಹಲಿ ಸರ್ಕಾರಕ್ಕೆ ಇರುಸುಮುರುಸು ಉಂಟು ಮಾಡಿತ್ತು.
"ಯಾವುದೇ ಪ್ರಚೋದನೆ ಇದ್ದರೂ, ಚುನಾಯಿತ ಸರ್ಕಾರವನ್ನು ಕಡೆಗಣಿಸಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಲು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸಂವಿಧಾನದಲ್ಲಿ ಯಾವುದೇ ವಿಶೇಷ ಅಧಿಕಾರ ಇಲ್ಲ" ಎಂದು ಸರ್ಕಾರ ಹೇಳಿದೆ. ಗ್ಯಾಮ್ಲಿನ್ ಅವರ ವರ್ತನೆ ಬಗ್ಗೆ ಪ್ರಶ್ನೆಗಳಿದ್ದರೂ ಅವರನ್ನು ನೇಮಿಸಿರುವುದರ ಬಗ್ಗೆ ಸರ್ಕಾರ ಕಿಡಿ ಕಾರಿದೆ.
ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಜಂಗ್ ತಾವು ಕಾನೂನುಬದ್ಧವಾಗಿಯೇ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ೧೯೮೪ನೆ ಸಾಲಿನ ಐ ಎ ಎಸ್ ಅಧಿಕಾರಿ ಗ್ಯಾಮ್ಲಿನ್ ಅವರಿಗೆ ಹುದ್ದೆಯ ರೇಸಿನಿಂದ ಹಿಂದೆ ಸರಿಯುವಂತೆ ಹಿರಿಯ ಅಧಿಕಾರಿಗಳಿಂದ ತೀವ್ರ ಒತ್ತಡವಿದೆ ಎಂದು ಜಂಗ್ ಅವರಿಗೆ ಪತ್ರ ಬರೆದ ಕೆಲವೇ ಗಂಟೆಗಳಲ್ಲಿ ಅವರನ್ನು ಈ ಉನ್ನತ ಹುದ್ದೆಗೆ ನೇಮಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


