ಶಾರದಾ ಚಿಟ್ ಫಂಡ್ ಹಗರಣ: ಶೀಘ್ರವೇ ಹಣ ವಾಪಸ್ : ಮಿಥುನ್ ಚಕ್ರವರ್ತಿ ಭರವಸೆ
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಬಾಲಿವುಡ್ ನಟ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಿಥುನ್ ಚಕ್ರವರ್ತಿ......

ಕೋಲ್ಕೋತಾ: ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಬಾಲಿವುಡ್ ನಟ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ಮಿಥುನ್ ಚಕ್ರವರ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ತಾವು ನೀಡಬೇಕಿರುವ ಹಣವನ್ನು ಶೀಘ್ರವೇ ವಾಪಸ್ ನೀಡುವುದಾಗಿ ಅಧಿಕಾರಿಗಳಿಗೆ ವಿಚಾರಣೆ ವೇಳೆ ಭರವಸೆ ನೀಡಿದ್ದಾರೆ.
ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ಸಂಸದರ ಹೇಳಿಕೆಯನ್ನೆಲ್ಲಾ ರೆಕಾರ್ಡ್ ಮಾಡಿದ್ದಾರೆ. ಹಗರಣದಲ್ಲಿ ನನ್ನ ತಪ್ಪಿಲ್ಲ. ತಾನು ಶಾರದಾ ಚಿಟ್ ಫಂಡ್ ಸಂಸ್ಥೆಯ ರಾಯಭಾರಿಯಾಗಿದ್ದೆ, ಹಣದ ವಂಚನೆಗೂ ತಮಗೂ ಸಂಬಂಧವಿಲ್ಲವೆಂದು ಸ್ಪಷ್ಟನೆ ನೀಡಿರುವ ಮಿಥುನ್ ಚಕ್ರವರ್ತಿ ತಾವು ಕಂಪನ್‌ಯೊಂದಿಗೆ ಮಾಡಿಕೊಂಡಿದ್ದ ಒಪ್ಪಂದಗಳ ಸಿಡಿ, ಡಿವಿಡಿ ಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ನೀಡಿದ್ದಾರೆ.
ತಮಗೆ ಕಂಪನಿ ಜೊತೆ ವೃತ್ತಿಪರ ಸಂಬಂಧವಿತ್ತು. ಯಾರಿಗೂ ವಂಚಿಸುವ ಉದ್ದೇಶ ನನ್ನದಾಗಿರಲಿಲ್ಲ ಎಂದು ವಿಚಾರಣೆ ವೇಳೆ ಹೇಳಿದ್ದಾರೆ.
ಇನ್ನು ಮಿಥುನ್ ಚಕ್ರವರ್ತಿ ಹೇಳಿಕೆಯಿಂದ ತೃಪ್ತರಾಗಿರುವ ಇಡಿ ಅಧಿಕಾರಿಗಳು , ಪ್ರಕರಣ ಸಂಬಂಧ ಮತ್ತೊಮ್ಮೆ ಅವರನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


