ರಿಟರ್ನ್ಸ್ ವೇಳೆ ಕಂಪನಿ ಪ್ರವಾಸ ವಿವರ ಬೇಕಿಲ್ಲ
ಕಂಪನಿ ಪ್ರಾಯೋಜಿತ ವಿದೇಶಿ ಪ್ರವಾಸದ ಮಾಹಿತಿಯನ್ನು ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂನಲ್ಲಿ ಕಡ್ಡಾಯವಾಗಿ ಬಹಿರಂಗಪಡಿಸಬೇಕೆನ್ನುವ ಪ್ರಸ್ತಾಪವನ್ನು ಸರ್ಕಾರ ಹಿಂಪಡೆಯುವ ನಿರೀಕ್ಷೆ...

ನವದೆಹಲಿ: ಕಂಪನಿ ಪ್ರಾಯೋಜಿತ ವಿದೇಶಿ ಪ್ರವಾಸದ ಮಾಹಿತಿಯನ್ನು ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂನಲ್ಲಿ ಕಡ್ಡಾಯವಾಗಿ ಬಹಿರಂಗಪಡಿಸಬೇಕೆನ್ನುವ ಪ್ರಸ್ತಾಪವನ್ನು ಸರ್ಕಾರ ಹಿಂಪಡೆಯುವ ನಿರೀಕ್ಷೆ ಇದೆ. ಆದರೆ, ಬ್ಯಾಂಕ್‍ಗಳಲ್ಲಿ ಹೊಂದಿರುವ ಖಾತೆ ಹಾಗೂ ಅದರಲ್ಲಿ ಇರುವ ಹಣವನ್ನು ಬಹಿರಂಗಪಡಿಸುವುದು ಕಡ್ಡಾಯ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಈ ಹಿಂದೆ ಹೊರತರಲಾಗಿದ್ದ ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂಗೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಸರಳ ಹಾಗೂ ಸುಲಭವಾಗಿ ಭರ್ತಿ ಮಾಡಬಹುದಾದ ಅರ್ಜಿ ಹೊರತರಲು ಉದ್ದೇಶಿಸಿದೆ.
ವಿದೇಶಿ ಪ್ರವಾಸಕ್ಕೆ ಸಂಬಂಧಿಸಿ ಕಂಪನಿ ಪ್ರಾಯೋಜಿತ ಪ್ರವಾಸದ ಮಾಹಿತಿ ಬಹಿರಂಗಪಡಿಸಬೇಕೆಂದಿಲ್ಲ. ಆದರೆ, ವೈಯಕ್ತಿಕ ಪ್ರವಾಸ ವೆಚ್ಚವು ನಿಗದಿತ ಮಿತಿಗಿಂತ ಹೆಚ್ಚಿದ್ದರೆ ಆ ಕುರಿತ ಮಾಹಿತಿ ಬಹಿರಂಗಪಡಿಸುವುದು ಕಡ್ಡಾಯವಾಗುವ ಸಾಧ್ಯತೆ ಇದೆ. ಅಂತಿಮ ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಫಾರಂ ಕುರಿತು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಂಗಳಾಂತ್ಯದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


