ದೇಶ

ಬೆಂಗಳೂರು ಮಾದರಿಯಲ್ಲೇ ಹೈದರಾಬಾದ್‌ನ ಎಟಿಎಂನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ

ಬೆಂಗಳೂರು ಮಾದರಿಯಲ್ಲೇ ಹೈದರಾಬಾದ್‌ನಲ್ಲಿ ಎಟಿಎಂನಲ್ಲಿ ಮಹಿಳೆ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ, ಗುಂಡು ಹಾರಿಸಿದ ಘಟನೆ ಬುಧವಾರ ನಡೆದಿದೆ.

ಬೆಂಗಳೂರು ಮಾದರಿಯಲ್ಲೇ ಹೈದರಾಬಾದ್‌ನ ಎಟಿಎಂನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ
ಎಟಿಎಂ
Published On :

ಹೈದರಾಬಾದ್: ಬೆಂಗಳೂರು ಮಾದರಿಯಲ್ಲೇ ಹೈದರಾಬಾದ್‌ನಲ್ಲಿ ಎಟಿಎಂನಲ್ಲಿ ಮಹಿಳೆ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ, ಗುಂಡು ಹಾರಿಸಿದ ಘಟನೆ ಬುಧವಾರ ನಡೆದಿದೆ.

ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ನಗರದ ಹೃದಯ ಭಾಗದಲ್ಲಿರುವ ಎಸ್‌ಬಿಐ ಎಟಿಎಂಗೆ ನುಗ್ಗಿದ ಮುಸುಕುಧಾರಿಯೊಬ್ಬ ಹಣ ಡ್ರಾ ಮಾಡುತ್ತಿದ್ದ 24 ವರ್ಷದ ಶ್ರೀಲತಾ ಮೇಲೆ ಹಲ್ಲೆ ನಡೆಸಿ, ಹಣ ನೀಡುವಂತೆ ಒತ್ತಾಯಿಸಿದ್ದಾನೆ. ಮಹಿಳೆ ಹಣ ನೀಡಲು ನಿರಾಕರಿಸಿದ್ದಕ್ಕೆ ಎಟಿಎಂನ ಗೋಡೆ ಮೇಲೆ ಗುಂಡು ಹಾರಿಸಿ, ಬೆದರಿಸಿ, ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ.

ಶ್ರೀಲತಾ ಕಾಲ್ ಸೆಂಟರ್ ಉದ್ಯೋಗಿಯಾಗಿದ್ದು, ಅದೃಷ್ಟವಷಾತ್‌ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಮುಸುಕುಧಾರಿ ವ್ಯಕ್ತಿ ಎಟಿಎಂಗೆ ಆಗಮಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

2013 ನವೆಂಬರ್‌  19ರಂದು ಬೆಂಗಳೂರಿನ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಎನ್ನುವರ ಮೇಲೆ ದುಷ್ಕರ್ಮಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಇದುವರೆಗೂ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.