ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಸಂವಿಧಾನದಲ್ಲಿ ಅವಕಾಶವಿದೆಯೇ: ಜಂಗ್ ಗೆ ಸಿಸೋಡಿಯಾ ಪತ್ರ
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ಆದೇಶದಂತೆ ಸರ್ಕಾರಿ ಅಧಿಕಾರಿಗಳು ಹಾಗೂ ಮಾಧ್ಯಮದವರೆಲ್ಲಾ ಒಂದಾಗಿ ಆಪ್ ಸರ್ಕಾರದ ವಿರುದ್ಧ ತಿರುಗಿನಿಂತಿದ್ದಾರೆ....

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ಆದೇಶದಂತೆ ಸರ್ಕಾರಿ ಅಧಿಕಾರಿಗಳು ಹಾಗೂ ಮಾಧ್ಯಮದವರೆಲ್ಲಾ ಒಂದಾಗಿ ಆಪ್ ಸರ್ಕಾರದ ವಿರುದ್ಧ ತಿರುಗಿನಿಂತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೇಮಿಸಿದ್ದ ಅಧಿಕಾರಿಗಳ ನೇಮಕವನ್ನು ಕಳೆದ ನಾಲ್ಕು ದಿನಗಳಲ್ಲಿ ಗವರ್ನರ್ ರದ್ದುಗೊಳಿಸಿದ್ದಾರೆ ಎಂದು ಕೇಜ್ರಿವಾಲ್ ದೂರಿದ್ದಾರೆ.
ಸಂವಿಧಾನದಲ್ಲಿ ರಾಜ್ಯಪಾಲರಿಗೆ ಇರುವ ಅಧಿಕಾರಗಳ ಬಗ್ಗೆ ತಮಗೆ ಮಾಹಿತಿ ನೀಡಬೇಕೆಂದು ದೆಹಲಿ ಉಪ ಮುಖ್ಯಮಂತ್ರಿ ಅರವಿಂದ್ ಸಿಸೋಡಿಯಾ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರು ನೇರವಾಗಿ ಆದೇಶ ನೀಡಲು ಸಮವಿಧಾನದಲ್ಲಿ ಅವಕಾಶವಿದೆಯೇ ಎಂಬುದನ್ನು ಪ್ರಶ್ನಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಆದೇಶದಂತೆ ಎಲ್ಲರೂ ತಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ. ಆದರೆ ದೆಹಲಿ ಜನತೆ ಮಾತ್ರ ತಮ್ಮನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ತಾವು ಬೇರೆ ಯಾವುದ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಜನತೆ ತಮಗೆ ಸ್ಪಷ್ಟವಾದ ಜನಾದೇಶ ನೀಡಿ ಆಡಳಿತ ನಡೆಸಲು ಮುಖ್ಯಮಂತ್ರಿ ಮಾಡಿದ್ದಾರೆ. ಅವರ ನಂಬಿಕೆ ಹಾಗೂ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಮ್ಮ ಸರ್ಕಾರ ಕೆಲಸ ಮಾಡುತ್ತಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


