ತ್ರಿರಾಷ್ಟ್ರ ಪ್ರವಾಸ ಬಳಿಕ ಉನ್ನತ ಸಚಿವರೊಂದಿಗೆ ಮೋದಿ ಸಭೆ
ಮೂರು ದೇಶಗಳ ಪ್ರವಾಸ ಪೂರ್ಣಗೊಳಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಇದೀಗ ತಮ್ಮ ಸರ್ಕಾರ 1 ವರ್ಷ ಪೂರ್ಣಗೊಳಿಸಿರುವ ಕುರಿತಂತೆ ಉನ್ನತ ಸಚಿವರೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ...

ನವದೆಹಲಿ: ಮೂರು ದೇಶಗಳ ಪ್ರವಾಸ ಪೂರ್ಣಗೊಳಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಇದೀಗ ತಮ್ಮ ಸರ್ಕಾರ 1 ವರ್ಷ ಪೂರ್ಣಗೊಳಿಸಿರುವ ಕುರಿತಂತೆ ಉನ್ನತ ಸಚಿವರೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ದೇಶದ ಜನತೆಗೆ ಅಚ್ಛೇ ದಿನ್ ನ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ಸರ್ಕಾರಕ್ಕೆ ಮೇ.26ಕ್ಕೆ 1 ವರ್ಷ ತುಂಬಲಿದ್ದು, ಈ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉನ್ನತ ಸಚಿವರಾದ ಗೃಹ ಸಚಿವ ರಾಜನಾಥಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಸಂಸದೀಯ ಸಚಿವ ವೆಂಕಯ್ಯನಾಯ್ಡು ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಭೆಯಲ್ಲಿ ಮೋದಿ ಅವರು ತಮ್ಮ ತ್ರಿರಾಷ್ಟ್ರ ಪ್ರವಾಸ, ತಮ್ಮ ಸರ್ಕಾರ 1 ವರ್ಷದ ಸಾಧನೆ, ದೇಶದ ಇತ್ತೀಚಿನ ಬೆಳವಣಿಗೆ ಹಾಗೂ ಅಭಿವೃದ್ಧಿ ಸೇರಿದಂತೆ ವಿರೋಧ ಪಕ್ಷದ ಬೆಳವಣಿಗೆಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ವರ್ಷಾಚರಣೆಯು ಮೇ.25 ರಿಂದಲೇ ಪ್ರಾರಂಭವಾಗುತ್ತಿದ್ದು, ಮಥುರಾ ಕ್ಷೇತ್ರದಲ್ಲಿ ದೊಡ್ಡ ರ್ಯಾಲಿಯೊಂದನ್ನು ಆಯೋಜಿಸಿದೆ. ಮೇ.26 ರಂದು ದೇಶದಾದ್ಯಂತ ಜನ ಕಲ್ಯಾಣ ಹಬ್ಬವನ್ನಾಗಿ ಆಚರಿಸಲು ನಿರ್ಧಾರ ಕೈಗೊಂಡಿರುವ ಬಿಜೆಪಿಯು ವರ್ಷಾಚರಣೆಯನ್ನು 1 ವಾರದವರೆಗೂ ವಿಶೇಷವಾಗಿ ಸಂಭ್ರಮಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


