ದೇಶ

ರಾಜೀವ್ ಗಾಂಧಿ ಪುಣ್ಯತಿಥಿ: ವೀರ ಭೂಮಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್, ಸೋನಿಯಾಗಾಂಧಿ

: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ 24ನೇ ಪುಣ್ಯತಿಥಿ ಸಮಾರಂಭವನ್ನು ವೀರ ಭೂಮಿಯಲ್ಲಿ ಆಚರಿಸಲಾಗುತ್ತಿದ್ದು, ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ...

ರಾಜೀವ್ ಗಾಂಧಿ ಪುಣ್ಯತಿಥಿ: ವೀರ ಭೂಮಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್, ಸೋನಿಯಾಗಾಂಧಿ
ರಾಜೀವ್ ಗಾಂಧಿ 24ನೇ ಪುಣ್ಯತಿಧಿ ಅಂಗವಾಗಿ ವೀರ ಭೂಮಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್, ಸೋನಿಯಾಗಾಂಧಿ
Published On :

ನವದೆಹಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ 24ನೇ ಪುಣ್ಯತಿಥಿ ಸಮಾರಂಭವನ್ನು ವೀರ ಭೂಮಿಯಲ್ಲಿ ಆಚರಿಸಲಾಗುತ್ತಿದ್ದು, ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ, ಅಳಿಯ ರಾಬರ್ಟ್ ವಾದ್ರಾ ಹಾಗೂ ಮತ್ತಿತರರು ಪುಷ್ಪಗಳನ್ನು ಅರ್ಪಿಸುವ ಮೂಲಕ ಗುರುವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ವೀರಭೂಮಿಗೆ ಆಗಮಿಸಿದ್ದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಪಿ.ಸಿ.ಚಿಕಾಗೋ, ಆಸ್ಕರ್ ಫರ್ನಾಂಡಿಸ್, ಗುಲಾಮ್ ನಬಿ ಆಜಾದ್, ಅಜಯ್ ಮಕೇನ್ ಹಾಗೂ ಕಾಂಗ್ರೆಸ್ ನಾಯಕರೆಲ್ಲರೂ ರಾಜೀವ್ ಗಾಂಧಿ ಅವರ ಸಮಾಧಿಗೆ ಹೂಗಳನ್ನು ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ನಂತರ ಶಕ್ತಿ ಸ್ಥಳಕ್ಕೆ ತೆರಳಿ ದಿವಂಗತ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಸಮಾಧಿಗೂ ಶ್ರದ್ದಾಂಜಲಿ ಸಲ್ಲಿಸಿದರು.

ರಾಜೀವ್ ಗಾಂಧಿ ಅವರ ಪುಣ್ಯತಿಥಿಯನ್ನು ಸ್ಮರಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.