ದೇಶ

ನಮ್ಮ ನಡುವಿನ ಸಂಬಂಧ ಚೆನ್ನಾಗಿದೆ:ಸಿಸೋಡಿಯಾ

ದೆಹಲಿಯಲ್ಲಿ ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳ ನಡುವಿನ ಸಂಬಂಧ ಉತ್ತಮವಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ...

ನಮ್ಮ ನಡುವಿನ ಸಂಬಂಧ ಚೆನ್ನಾಗಿದೆ:ಸಿಸೋಡಿಯಾ
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
Published On :

ನವದೆಹಲಿ: ದೆಹಲಿಯಲ್ಲಿ ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳ ನಡುವಿನ ಸಂಬಂಧ ಉತ್ತಮವಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ.

ಸರ್ಕಾರ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿದೆ. ಇದುವರೆಗೆ ದೆಹಲಿಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ಉದ್ಯಮದಂತೆ ಬೆಳೆದುಹೋಗಿತ್ತು. ನಾವು ಅದನ್ನು ನಿಲ್ಲಿಸಿದೆವು. ಅದಕ್ಕೆ ಜನರು ನಮ್ಮನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.
ಮುಕ್ತ ಮತ್ತು ನಿಸ್ಪಕ್ಷಪಾತ ರೀತಿಯಲ್ಲಿ ಕೆಲಸ ಮಾಡಲು ಬಿಡಬೇಕೆಂದು ಗೃಹ ಸಚಿವ ರಾಜನಾಥ್ ಸಿಂಗ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಮುಖ್ಯಮಂತ್ರಿಗಳನ್ನು ಒತ್ತಾಯಿಸಲು ದೆಹಲಿ ಐಎಎಸ್ ಅಧಿಕಾರಿಗಳ ಸಂಘ ನಿನ್ನೆ ನಿರ್ಣಯ ತೆಗೆದುಕೊಂಡ ಬೆನ್ನಲ್ಲೇ ಸಿಸೋಡಿಯಾ ಈ ಹೇಳಿಕೆ ನೀಡಿದ್ದಾರೆ.

ಸಂವಿಧಾನದ ಯಾವ ಸಾಧ್ಯತೆ  ಮೇಲೆ ದೆಹಲಿ ಸರ್ಕಾರಕ್ಕೆ ನಿರ್ದೇಶನ ಮತ್ತು ಆದೇಶಗಳನ್ನು ನೀಡುತ್ತಿರುವುದಾಗಿ ತಿಳಿಸುವಂತೆ ಕೋರಿ ಸಿಸೋಡಿಯಾ ಬುಧವಾರ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.ಸಂವಿಧಾನದ Government of National Capital Territory of Delhi Actನಡಿ ಉತ್ತರಿಸುವಂತೆ ಅವರು ಕೇಳಿದ್ದರು. ಅದಕ್ಕೆ ಉತ್ತರಿಸಿರುವ ಲೆಫ್ಟಿನೆಂಟ್ ಗವರ್ನರ್ ಜಂಗ್, ತಮಗೆ ಅಧಿಕಾರಿಗಳ ವರ್ಗಾವಣೆ ಮತ್ತು  ನೇಮಕಾತಿಗೆ ಸಂವಿಧಾನಿಕ ಅಧಿಕಾರವಿದೆ ಎಂದು ಹೇಳಿದ್ದಾರೆ.   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.