ಆರ್ಥಿಕಾಭಿವೃದ್ಧಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು: ಅರುಣ್ ಜೇಟ್ಲಿ
ವಿಶ್ವದ ಆರ್ಥಿಕಾಭಿವೃದ್ಧಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತವೂ ಸೇರಿದ್ದು, ಅಭಿವೃದ್ಧಿ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯ ಮತ್ತಷ್ಟು ಹೆಚ್ಚಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ವಿಶ್ವದ ಆರ್ಥಿಕಾಭಿವೃದ್ಧಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತವೂ ಸೇರಿದ್ದು, ಅಭಿವೃದ್ಧಿ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯ ಮತ್ತಷ್ಟು ಹೆಚ್ಚಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಹೇಳಿದ್ದಾರೆ.
ಮೋದಿ ಸರ್ಕಾರ ವರ್ಷಾಚರಣೆ ಕುರಿತಂತೆ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರ್ದೇಶನದಿಂದ ನಡೆದುಕೊಂಡು ಬಂದಿದ್ದು, ಇದೀಗ ನಮ್ಮ ಸರ್ಕಾರಕ್ಕೆ 1 ವರ್ಷದ ತುಂಬುವ ಕಾಲ ಬಂದಿದೆ. ಸರ್ಕಾರ ಸಾಧನೆ ಇದೀಗ ದೇಶದ ಸಾಧನೆಯಾಗಿದ್ದು, ಮೋದಿ ಅವರನ್ನು ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳೂ ಕೂಡ ಗೌರವಿಸುತ್ತಿವೆ.
ಮೋದಿ ಈಗಾಗಲೇ 18 ರಾಷ್ಟ್ರಗಳಿಗೆ ಭೇಟಿ ನೀಡಿದ್ದು, ಒಪ್ಪಂದಗಳ ಮೂಲಕ ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ. ಇದೀಗ ಭಾರತ ಇತರೆ ದೇಶಗಳಂತೆಯೇ ಸಮಾನ ಸ್ಥಾನದಲ್ಲಿ ನಿಲ್ಲುವಂತಾಗಿದೆ. ಭಾರತದ ಜೊತೆ ಇರಾಕ್, ಮಾಲ್ಡೀವ್ಸ್ ಮತ್ತು ನೇಪಾಳ ದೇಶಗಳಿಗೆ ಸಾಕಷ್ಟು ಗೊಂದಲ ಹಾಗೂ ಸಮಸ್ಯೆಗಳಿತ್ತು. ಆ ಸಮಸ್ಯೆಗಳನ್ನು ಮೋದಿ ತಮ್ಮ ಪ್ರವಾಸದ ಮೂಲಕ ರಾಜತಾಂತ್ರಿಕ, ವಿದೇಶಾಂಗ ನೀತಿಗಳನ್ನು ಅನುಸರಿಸುವ ಮೂಲಕ ಸಮಸ್ಯೆಯನ್ನು ನಿವಾರಿಸಿದ್ದಾರೆ ಎಂದು ಹೇಳಿದ್ದಾರೆ..
ವಿರಾಮವಿಲ್ಲದೆಯೇ ಭಾರತ ಅಭಿವೃದ್ಧಿ ಕಾಣುತ್ತಿದ್ದು, ಭಾರತ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡು ಮತ್ತಷ್ಟು ಅಭಿವೃದ್ಧಿ ಕಾಣಬೇಕಿದೆ. ಮೋದಿ ಸರ್ಕಾರ ಪಾರದರ್ಶಕತೆಯ ಸರ್ಕಾರವನ್ನು ಬಯಸಿತ್ತು. ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರ ಪಾರದರ್ಶಕತೆ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದು, ಇದೀಗ ಸರ್ಕಾರದ ಸಾಧನೆ ಎಲ್ಲರಿಗೂ ಕಾಣಿಸುತ್ತಿದೆ. ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದೆ. ಭಾರತದಲ್ಲಿ ಸಾಕಷ್ಟು ಅಭಿವೃದ್ಧಿಗಳಾಗಿದ್ದು, ಇದೀಗ ಭಾರತ ಜಾಗತಿಕ ಮಟ್ಟದಲ್ಲಿ ಅಭಿವೃದ್ದಿ ಕಾಣುತ್ತಿದೆ.
ವಿಮಾ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಇದೀಗ 7.5 ರಷ್ಟು ಜನರು ವಿಮಾ ಸೌಲಭ್ಯವನ್ನು ಪಡೆದಿದ್ದಾರೆ. ಭಾರತ ಪಿಂಚಣಿಯಿಲ್ಲದ ದೇಶವಾಗಿದ್ದು, ಪ್ರಸ್ತುತ ಶೇ.11 ರಷ್ಟು ಪಿಂಚಣಿಯನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಮತ್ತಷ್ಟು ಹೆಚ್ಚಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದೇ ಭಾರತ ಪ್ರಮುಖ ಸಮಸ್ಯೆಗಳ ಕುರಿತಂತೆ ಮಾತನಾಡಿರುವ ಅವರು ಉದ್ಯೋಗಾವಕಾಶ, ಹಣದುಬ್ಬರ, ಅಕಾಲಿಕ ಮಳೆಯಂತಹ ಸಮಸ್ಯೆಗಳು ದೊಡ್ಡ ಇದೀಗ ಸರ್ಕಾರಕ್ಕೆ ಬಹು ದೊಡ್ಡ ಸವಾಲಾಗಿದೆ. ಈ ಸಮಸ್ಯೆ ಎದುರಿಸಲು ಸರ್ಕಾರ ಮುಂದಿನ ವರ್ಷದಲ್ಲಿ ಪೂರ್ವ ತಯಾರಿ ಹಾಗೂ ಯೋಜನೆಗಳನ್ನು ರೂಪಸಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


