ಮೋದಿ ಸರ್ಕಾರಕ್ಕೆ 1 ವರ್ಷ: 200 ರ್ಯಾಲಿ, 5 ಸಾವಿರ ಸಾರ್ವಜನಿಕ ಸಭೆ ನಡೆಸಲು ಬಿಜೆಪಿ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ಪೂರೈಸಿದ ಹಿನ್ನೆಲೆಯಲ್ಲಿ 200 ರ್ಯಾಲಿ ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ನಡೆಸುವ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ಪೂರೈಸಿದ ಹಿನ್ನೆಲೆಯಲ್ಲಿ 200 ರ್ಯಾಲಿ ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ವರ್ಷಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದೆ.
ವರ್ಷದ ಸಂಭ್ರಮ ಆಚರಣೆಯ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೇ 25ರಂದು ಮಥುರಾದಲ್ಲಿ ಸಾರ್ವಜನಿಕ ರ್ಯಾಲಿ ನಡೆಸಲಿದ್ದಾರೆ ಮತ್ತು ಮೇ 26ರಂದು ರೈತರ ಚಾನೆಲ್ ಅನ್ನು ಉದ್ಘಾಟಿಸಲಿದ್ದಾರೆ ಎಂದರು.
ಮೇ 26ರ ನಂತರ ಪ್ರಧಾನಿ ಅವರು ಹರಿಯಾಣದ ಕರ್ನಲ್‌ನಲ್ಲಿ ಮತ್ತೊಂದು ರ್ಯಾಲಿ ನಡೆಸಲಿದ್ದಾರೆ ಎಂದು ಅನಂತಕುಮಾರ್ ತಿಳಿಸಿದರು.
ಮೇ 27ರಂದು ಸಂಜೆ 5 ಗಂಟೆಗೆ ಗುಜರಾತ್‌ನ ಸುರತ್‌ನಲ್ಲಿ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಸಾರ್ವಜನಿಕಗೊಳಿಸಲು ಪ್ರಧಾನಿ ಅವರು ದೇಶದಲ್ಲಿ 200 ದೊಡ್ಡ ರ್ಯಾಲಿಗಳನ್ನು ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


