ಗೃಹ ಸಚಿವಾಲಯದ ಅಧಿಸೂಚನೆ ಬಗ್ಗೆ ಕಾನೂನು ಸಲಹೆ ಕೇಳಿದ ದೆಹಲಿ ಸರ್ಕಾರ
ಅಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿನ್ನೆ ಹೊರಡಿಸಿದ್ದ ಅಧಿಸೂಚನೆ ಬಗ್ಗೆ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ...

ನವದೆಹಲಿ: ಅಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ನಿನ್ನೆ ಹೊರಡಿಸಿದ್ದ ಅಧಿಸೂಚನೆ ಬಗ್ಗೆ ಆಮ್ ಆದ್ಮಿ ಪಕ್ಷದ ದೆಹಲಿ ಸರ್ಕಾರ ಶನಿವಾರ ಕಾನೂನು ಮತ್ತು ಸಂವಿಧಾನ ತಜ್ಞರ ಸಲಹೆ ಕೇಳಿದೆ.
ಅಧಿಕಾರಿಗಳ ನೇಮಕ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಕಿತ್ತಾಟಕ್ಕೆ ತಾತ್ಕಾಲಿಕ ತೆರೆ ಎಳೆದಿದ್ದ ಕೇಂದ್ರ ಸರ್ಕಾರ, ಉನ್ನತ ಅಧಿಕಾರಿಗಳ ನೇಮಕ ಮತ್ತ ವರ್ಗಾವಣೆ ಅಧಿಕಾರ ಗವರ್ನರ್‌ಗೆ ಇದೆ ಎಂದು ಸ್ಪಷ್ಟಪಡಿಸಿತ್ತು.
ಈ ಸಂಬಂಧ ವಿಶೇಷ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಗೃಹ ಸಚಿವಾಲಯ, ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆಯುವುದು ಕಡ್ಡಾಯವಲ್ಲ ಎಂದು ಹೇಳಿತ್ತು.
ಇನ್ನು ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ನರೇಂದ್ರ ಮೋದಿ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಅಧಿಸೂಚನೆ ದಿಲ್ಲಿಯ ಜನಾದೇಶವನ್ನು ಅವಮಾನಿಸುವಂತಿದೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


