ದೇಶ

ಸೌದಿ ಮಸೀದಿಯಲ್ಲಿ ಆತ್ಮಹತ್ಯೆ ಬಾಂಬ್ ದಾಳಿ, 21 ಸಾವು

ಐಎಸ್‌ ಉಗ್ರರು ಸೌದಿ ಅರೇಬಿಯಾದ ಮಸೀದಿಯೊಂದರಲ್ಲಿ ಆತ್ಮಹತ್ಯಾ ಬಾಂಬ್‌ ದಾಳಿ ನಡೆಸಿದ್ದು, ದಾಳಿಯಲ್ಲಿ 21 ಮಂದಿ ಮೃತಪಟ್ಟಿದ್ದಾರೆ....

ಸೌದಿ ಮಸೀದಿಯಲ್ಲಿ ಆತ್ಮಹತ್ಯೆ ಬಾಂಬ್ ದಾಳಿ, 21 ಸಾವು
Published On :

ರಿಯಾದ್‌: ಐಎಸ್‌ ಉಗ್ರರು ಸೌದಿ ಅರೇಬಿಯಾದ ಮಸೀದಿಯೊಂದರಲ್ಲಿ ಆತ್ಮಹತ್ಯಾ ಬಾಂಬ್‌ ದಾಳಿ ನಡೆಸಿದ್ದು, ದಾಳಿಯಲ್ಲಿ 21 ಮಂದಿ ಮೃತಪಟ್ಟಿದ್ದಾರೆ ಮತ್ತು 81 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ತಡ ರಾತ್ರಿ ಇಲ್ಲಿನ ಶಿಯಾ ಮಸೀದಿಯಲ್ಲಿ ಪ್ರಾರ್ಥನೆ ಮುಗಿದ ಬಳಿಕ ಐಎಸ್ ಉಗ್ರರು ಆತ್ಮಹತ್ಯಾ ಬಾಂಬ್‌ ದಾಳಿ ನಡೆಸಿದ್ದಾರೆ.

ಶಿಯಾ ಸಮುದಾಯದವರ ಪ್ರಾಬಲ್ಯವಿರುವ ಈ ಪ್ರಾಂತ್ಯದಲ್ಲಿ ಐಎಸ್‌ ಉಗ್ರರು ದಾಳಿ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೌದಿಯ ಆರೋಗ್ಯ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.