ಟಿಎಂಸಿ ಶಾಸಕನ ಮನೆಯಲ್ಲಿ ಬಾಂಬ್ ಸ್ಫೋಟ: ಪತ್ನಿ ಸಾವು
ತೃಣಮೂಲ ಕಾಂಗ್ರೆಸ್ ಶಾಸಕರೊಬ್ಬರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಶಾಸಕರ ಪತ್ನಿ ಸ್ಥಳದಲ್ಲೇ ಮೃತಪಟ್ಟಿರುವ...

ಬೀರ್‌ಭೂಮ್: ತೃಣಮೂಲ ಕಾಂಗ್ರೆಸ್ ಶಾಸಕರೊಬ್ಬರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಶಾಸಕರ ಪತ್ನಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಪಶ್ಚಿಮ ಬಂಗಾಳದ ಬೀರ್‌ಭೂಮ್ ನಲ್ಲಿ ನಡೆದಿದೆ.
ಟಿಎಂಸಿ ಶಾಸಕ ಬರೋ ಹನ್‌ಸಡಾ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸ್ಪೋಟಗೊಂಡ ಪರಿಣಾಮವಾಗಿ ಶಾಸಕರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಫೋಟದಲ್ಲಿ ಶಾಸಕ ಹನ್‌ಸಡಾ ಕೂಡ ಗಾಯಗೊಂಡಿದ್ದು ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿ, ಭದ್ರತೆ ಬಿಗಿಗೊಳಿಸಿದ್ದಾರೆ.
ನಾಲ್ಕು ದಿನಗಳ ಹಿಂದಷ್ಟೇ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕಚ್ಚಾ ಬಾಂಬ್ ಕಾಳಗ ನಡೆದಿತ್ತು. ಈ ಕಾಳಗದಲ್ಲಿ ಇಬ್ಬರು ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಸ್ಥಳೀಯ ಶಾಸಕರ ಮನೆಯಲ್ಲಿ ಅಪಾಯಕಾರಿ ನಾಡಬಾಂಬ್ ಸ್ಪೋಟಗೊಂಡಿರುವುದು ಜನತೆಯಲ್ಲಿ ಭೀತಿ ಮೂಡಿಸಿದೆ. ಈ ನಡುವೆ ಶಾಸಕರ ಮನೆಯಲ್ಲೇ ನಾಡಬಾಂಬ್ ಸಿಡಿದಿರುವುದು ಆಡಳಿತಾರೂಢ ಟಿಎಂಸಿಗೆ ಭಾರೀ ಕಳಂಕ ತಂದಿಟ್ಟಿದೆ.
ಇತ್ತೀಚಿನ ದಿನಗಳಲ್ಲಿ ಬಿಜೆಪಿ ತನ್ನನೆಲೆ ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದ್ದು, ಇದು ತೃಣಮೂಲ ಕಾರ್ಯಕರ್ತರನ್ನು ಸಿಟ್ಟಿಗೆಬ್ಬಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಟಿಎಂಸಿ ಕಾರ್ಯಕರ್ತರ ಹಿಂಸಾಚಾರ ಮಾಮೂಲಿಯಾಗಿಬಿಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


