ಜಯಾ ವಿರುದ್ಧ ಕಾನೂನು ಸಮರಕ್ಕೆ ಡಿಎಂಕೆ ಸಜ್ಜು
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡು 5 ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜಯಾಲಲಿತಾ ವಿರುದ್ಧ....

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡು 5 ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜಯಾಲಲಿತಾ ವಿರುದ್ಧ ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಡಿಎಂಕೆ ನಿರ್ಧರಿಸಿದೆ.
ಜಯಲಲಿತಾ ಬದ್ದ ವೈರಿಯಾದ ಡಿಎಂಕೆ ಯ ಈ ಕಾನೂನು ಸಮರದಿಂದ ಜಯಾ ಕುರ್ಚಿಗೆ ಮತ್ತೆ ಧಕ್ಕೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಡಿಎಂಕೆಯ ಎಲ್ಲಾ ಜಿಲ್ಲಾ ಕಾರ್ಯದರ್ಶಿಗಳು ನಡೆಸಿದ ಸಭೆಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಜಯಾ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಇನ್ನೂ ಕರ್ನಾಟಕದಲ್ಲೂ ಕಾಂಗ್ರೆಸ್ ಕಾನೂನು ಘಟಕ ಕೂಡ ಜಯಾ ವಿರುದ್ಧ ಸುಪ್ರಿಂ ನಲ್ಲಿ ಮೇಲ್ಮನವಿ ಸಲ್ಲಿಸಲು ಚಿಂತನೆ ನಡೆಸಿದೆ.
ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಜಯಲಲಿತಾ ಕರ್ನಾಟಕ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಮೇ 11 ರಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಎಲ್ಲಾ ಶಿಕ್ಷೆಗಳನ್ನು ರದ್ದುಗೊಳಿಸಿ ಜಯಲಲಿತಾರನ್ನು ಖುಲಾಸೆಗೊಳಿಸಿತ್ತು. ನಂತರ ಮೇ 23 ರಂದು ಜಯಲಲಿತಾ ತಮಿಳುನಾಡು ಮುಖ್ಯಮಂತ್ರಿಯಾಗಿ 5 ನೇ ಪ್ರಮಾಣ ವಚನ ಸ್ವೀಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


