ದೇಶ

ಡಿಎಂಕೆಯಿಂದ ಜಯಾ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ...

ಡಿಎಂಕೆಯಿಂದ ಜಯಾ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ
ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ
Published On :

ಚೆನ್ನೈ: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವುದಾಗಿ ಸೋಮವಾರ ಡಿಎಂಕೆ ಹೇಳಿದೆ.

'ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಭಾಗಿಯಾಗುವ ಹಕ್ಕು ಡಿಎಂಕೆ ಇದೆ ಎಂದು ಸುಪ್ರೀಂ ಕೋರ್ಟ್ ಎರಡು ಬಾರಿ ಹೇಳಿದೆ. ಹೀಗಾಗಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಪಕ್ಷ ಮೇಲ್ಮನವಿ ಸಲ್ಲಿಸಲಿದೆ' ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಯಲಲಿತಾ ಹಾಗೂ ಇತರೆ ಮೂವರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರದ ಮೇಲೂ ಒತ್ತಡ ಹೇರಲಾಗುವುದು ಎಂದು ಕರುಣಾನಿಧಿ ಅವರು ಹೇಳಿದ್ದಾರೆ.

ಈಗಾಗಲೇ ಕರ್ನಾಟಕದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು ಮೇಲ್ಮನವಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಡಿಎಂಕೆ ಮುಖ್ಯಸ್ಥರು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರು ದೋಷಿ ಎಂದು ಬೆಂಗಳೂರು ಸೆಷೆನ್ಸ್ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಆದರೆ ಮೇ 11ರಂದು ಕರ್ನಾಟಕ ಹೈಕೋರ್ಟ್ ಸೆಷೆನ್ಸ್ ಕೋರ್ಟ್ ತೀರ್ಪು ರದ್ದುಗೊಳಿಸಿ, ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಜಯಾ ಮತ್ತೆ ಸಿಎಂ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.