ರಾಮಮಂದಿರ ನಿರ್ಮಾಣಕ್ಕೆ ಸಹಾಯ ಮಾಡಲು ಸರ್ಕಾರ ಸಿದ್ಧ: ಶ್ರೀಪಾದ್ ನಾಯ್ಕ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಮಂಗಳವಾರ ಹೇಳಿದ್ದಾರೆ...

ಪಣಜಿ:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಮಂಗಳವಾರ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರ ಬಹಳ ಗಂಭೀರವಾಗಿದ್ದು, ವಿಷಯ ಇತ್ಯರ್ಥಗೊಳ್ಳಲು ಬಹಳ ಸಮಯಬೇಕಾಗುತ್ತದೆ. ರಾಮಮಂದಿರ ನಿರ್ಮಾಣ ಕೆಲಸ ದೇಶದ ಕೆಲಸ ಎಂಬುದನ್ನು ನಾವು ಒಪ್ಪುತ್ತೇವೆ. ಆದರೆ, ರಾಮಮಂದಿರ ನಿರ್ಮಾಣದ ವಿಷಯ ಇದೀಗ ವಿಚಾರಣೆಯ ಹಂತದಲ್ಲಿದ್ದು, ಭೂಮಿ ದೊರಕಿದ ಕೂಡಲೇ ಮಂದಿರ ನಿರ್ಮಾಣಕ್ಕೆ ಸರ್ಕಾರ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಹಮತ ದೊರಕಿದರೆ. ಮಂದಿರ ನಿರ್ಮಾಣದ ಕುರಿತಂತೆ ಈವರೆಗೂ ಹೋರಾಟ ಮಾಡಿಕೊಂಡು ಬಂದಿರುವಂತಹ ಸಂಘಟನೆಗಳೇ ರಾಮಮಂದಿರ ನಿರ್ಮಾಣ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಯನ್ನು ಕೂಡಲೇ ಈಡೇರಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ವಿಶ್ವಹಿಂದೂ ಪರಿಷತ್ ಸಂಘಟನೆಗಳು ಆಗ್ರಹಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


