'ಸೂಟು-ಬೂಟು' ಸರ್ಕಾರಕ್ಕೆ ಅಭಿನಂದನೆ: ರಾಹುಲ್ ಗಾಂಧಿ
ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೂಟು-ಬೂಟು ಸರ್ಕಾರಕ್ಕೆ ಅಭಿನಂದನೆ ಎಂದು ಹೇಳುವ ಮೂಲಕ ಮೋದಿ ಸರ್ಕಾರಕ್ಕೆ ಚಿವುಟಿದ್ದಾರೆ...

ಕೋಝಿಕೋಡ್: ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೂಟು-ಬೂಟು ಸರ್ಕಾರಕ್ಕೆ ಅಭಿನಂದನೆ ಎಂದು ಹೇಳುವ ಮೂಲಕ ಮೋದಿ ಸರ್ಕಾರಕ್ಕೆ ಚಿವುಟಿದ್ದಾರೆ.
ಕೇರಳದ ಕೋಝಿಕೋಡ್ ನಲ್ಲಿ ನಡೆದ ರ್ಯಾಲಿಯೊಂದರಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಪರವಾಗಿ ಸೂಟುಬೂಟು ಸರ್ಕಾರಕ್ಕೆ ಅಭಿನಂದನೆ ಎಂದು ಹೇಳುವ ಮೂಲಕ ಮೋದಿ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ.
ಅನುವಾದಕರ ಸಹಾಯದಿಂದ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಅವರು, ಮೋದಿ ಸೂಟ್ ಕುರಿತಂತೆ ಕಟು ಟೀಕೆ ವ್ಯಕ್ತಪಡಿಸಿದ್ದಾರೆ. ಮೋದಿ ಸೂಟ್ ಬಗ್ಗೆ ಮತ್ತೆಂದೂ ಮಾತನಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದೆ. ಆದರೆ ಇದೀಗ ಮಾತನಾಡಲೇಬೇಕಾದ ಸಂದರ್ಭ ಎದುರಾಗಿದೆ. ಮೋದಿ ಸರ್ಕಾರವನ್ನು ಸೂಟು-ಬೂಟು ಸರ್ಕಾರ ಎಂದು ಕರೆಯುತ್ತೇನೆ. ಏಕೆಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೂಟು-ಬೂಟಿನ ಬಗ್ಗೆ ಹೆಚ್ಚು ವ್ಯಾಮೋಹವಿದೆ. ಹಾಗಾಗಿಯೇ ದೇಶದಲ್ಲಿ ಬಡವರು ಬಳಲುತ್ತಿರುವ ಸಂದರ್ಭದಲ್ಲೂ ಬರಾಕ್ ಒಬಾಮಾ ಭೇಟಿ ವೇಳೆ ಮೋದಿ 10 ಲಕ್ಷದ ಸೂಟು ಹೊಲಿಸಿಕೊಂಡಿದ್ಹರು. ಈ ನಿಟ್ಟಿನಲ್ಲಿ ನೋಡುವುದಾದರೆ ಮೋದಿ ಅವರನ್ನು ಫ್ಯಾಷನ್ ಐಕಾನ್ ಎಂದೇ ಕರೆಯಬಹುದು ಎಂದು ಹೇಳಿದ್ದಾರೆ.
ಇದೇ ವೇಳೆ ವಿವಾದಿತ ಮೋದಿ ಅವರ ವಿದೇಶ ಪ್ರವಾಸ ಹಾಗೂ ಭೂ ಕಾಯ್ದೆ ತಿದ್ದುಪಡಿ ಕುರಿತಂತೆ ಕಿಡಿಕಾಡಿರುವ ರಾಹುಲ್, ಎನ್ ಡಿಎ ಸರ್ಕಾರ ತಿದ್ದುಪಡಿ ತಂದಿರುವ ಭೂ ಮಸೂದೆ ರೈತ ವಿರೋಧಿಯಾಗಿದ್ದು, ಇದರಿಂದ ರೈತರಿಗೆ ನಷ್ಟವೇ ಹೊರತು ಲಾಭವಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


