ದೇಶ

ಭಾರತ ರಕ್ಷಿಸಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇನೆ: ಪರಿಕ್ಕರ್ ಸ್ಪಷ್ಟನೆ

ಭಯೋತ್ಪಾದಕರನ್ನು ಭಯೋತ್ಪಾದಕರಿಂದಲೇ ಮಟ್ಟಹಾಕಬೇಕೆಂಬ ವಿವಾದಾತ್ಮಕ ಹೇಳಿಕೆ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಭಾರತ ರಕ್ಷಿಸಲು ನಾನು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇನೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮಂಗಳವಾರ ಹೇಳಿದ್ದಾರೆ...

ಭಾರತ ರಕ್ಷಿಸಲು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇನೆ: ಪರಿಕ್ಕರ್ ಸ್ಪಷ್ಟನೆ
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್
Published On :

ನವದೆಹಲಿ: ಭಯೋತ್ಪಾದಕರನ್ನು ಭಯೋತ್ಪಾದಕರಿಂದಲೇ ಮಟ್ಟಹಾಕಬೇಕೆಂಬ ವಿವಾದಾತ್ಮಕ ಹೇಳಿಕೆ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಭಾರತ ರಕ್ಷಿಸಲು ನಾನು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇನೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಮಂಗಳವಾರ ಹೇಳಿದ್ದಾರೆ.

ಕಾಶ್ಮೀರದಲ್ಲಿ ಬೀಡುಬಿಟ್ಟುಕೊಂಡು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕರ ಕುರಿತಂತೆ ಹೇಳಿಕೆ ನೀಡಿದ್ದೆ ಹೊರತು, ಯಾವುದೇ ದೇಶ ಅಥವಾ ಒಂದು ವರ್ಗಕ್ಕೆ ಸಂಬಂಧಿಸಿ ಹೇಳಿದ್ದಲ್ಲ. ಭಯೋತ್ಪಾದನೆ ಕುರಿತಂತೆ ಹೇಳಿಕೆ ನೀಡಿದ ಮಾತ್ರಕ್ಕೆ ಭಯೋತ್ಪಾದಕರನ್ನು ಹುಟ್ಟುಹಾಕುತ್ತೇವೆಂಬ ಅರ್ಥ ಬರುವುದಿಲ್ಲ. ಭಯೋತ್ಪಾದಕರನ್ನು ಭಯೋತ್ಪಾದಕರಿಂದಲೇ ಮಟ್ಟಹಾಕಬೇಕು ಎಂಬುದು ಹತ್ಯೆ ಮಾಡುವುದು ಎಂಬ ಒಂದೇ ಅರ್ಥವನ್ನು ನೀಡುವುದಿಲ್ಲ. ಭಯೋತ್ಪಾದನೆಯನ್ನು ಮಟ್ಟ ಹಾಕಬೇಕೆಂಬ ಅರ್ಥವನ್ನು ನೀಡುತ್ತದೆ. ನಾನು ಯಾವುದೇ ಒಂದು ದೇಶ ಅಥವಾ ಒಂದು ವರ್ಗವನ್ನು ಸೂಚಿಸಿ ಹೇಳಿಕೆ ನೀಡಿಲ್ಲ. ನನ್ನ ದೇಶವನ್ನು ರಕ್ಷಣೆ ಮಾಡುವುದು ನನ್ನ ಕರ್ತವ್ಯ. ಹಾಗಾಗಿ ದೇಶವನ್ನು ರಕ್ಷಣೆ ಮಾಡಲು ನಾನು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇನೆ ಎಂದು ಹೇಳಿದ್ದಾರೆ.

ದೇಶಕ್ಕೆ ಅಪಾಯ ತರುವ ಕೆಲಸಗಳನ್ನು ಯಾರಾದರೂ ಮಾಡಿದರೆ, ದೇಶದ ಪರವಾಗಿ ಸಕ್ರಿಯ ಕ್ರಮಗಳನ್ನು ತೆಗೆದುಕೊಳ್ಳಬೇಕಾದದ್ದು ನನ್ನ ಕರ್ತವ್ಯ. ದೇಶದ ಮೇಲೆ ದಾಳಿ ಮಾಡುವವರ ವಿರುದ್ಧ ಪ್ರತಿದಾಳಿ ಮಾಡುವುದು ನಮ್ಮ ಕೆಲಸವಾಗಿರುತ್ತದೆ. ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಸಂವಿಧಾನವನ್ನು ರಕ್ಷಣೆ ಮಾಡುತ್ತೇನೆ ಎಂದು ಪ್ರಮಾಣ ಮಾಡಿದ್ದೆ. ಸಂವಿಧಾನವನ್ನು ಕಾಪಾಡುತ್ತೇನೆ ಎಂದರೆ ದೇಶವನ್ನು ಕಾಪಾಡುತ್ತೇನೆಂದು. ಈ ಕುರಿತಂತೆ ವ್ಯಾಖ್ಯಾನ ನೀಡುವುದು ನನಗೆ ಇಷ್ಟವಿಲ್ಲ ಎಂದು ಪರಿಕ್ಕರ್ ಹೇಳಿದ್ದಾರೆ.

ಭಯೋತ್ಪಾದನಾ ಚಟುವಟಿಕೆ ಕುರಿತಂತೆ ಗುರುವಾರ ಮಾತನಾಡಿದ್ದ ರಕ್ಷಣಾ ಸಚಿವರು,  26/11 ಮುಂಬೈ ದಾಳಿ ಮರುಕಳಿಸದಂತೆ ಭಾರತ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ. ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು ಎಂಬುದು ಸತ್ಯದ ಮಾತಾಗಿದ್ದು, ಭಯೋತ್ಪಾದಕರನ್ನು ಭಯೋತ್ಪಾದಕರಿಂದಲೇ ಹಿಮ್ಮೆಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಪ್ರತಿಕ್ರಿಯೆ ನೀಡಿದ್ದ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಅವರು, ಭಾರತ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡಿದೆ ಎಂಬ ಪಾಕಿಸ್ತಾನದ ನಿರೀಕ್ಷೆಯು ಪರಿಕ್ಕರ್ ಅವರ ಈ ಹೇಳಿಕೆಯಿಂದ ನಿಜವಾಗಿದೆ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.