ದೇಶ

ಆಂಧ್ರಪ್ರದೇಶ, ತೆಲಂಗಾಣದಲ್ಲಿ ಹೆಚ್ಚಿದ ಬಿಸಿಲು: 800ಕ್ಕೇರಿದ ಸಾವಿನ ಸಂಖ್ಯೆ

ದಕ್ಷಿಣ ಭಾರತದ ತೆಲಂಗಾಣ ಹಾಗೂ ಆಂಧ್ರಪದೇಶದಾದ್ಯಂತ ಬಿಸಿಲಿನ ಮರಣ ಮೃದಂಗ ಮಂದುವರೆದಿದ್ದು, ಸಾವಿನ ಸಂಖ್ಯೆ 800ಕ್ಕೇರಿದೆ ಎಂದು ಹೇಳಲಾಗುತ್ತಿದೆ...

ಆಂಧ್ರಪ್ರದೇಶ, ತೆಲಂಗಾಣದಲ್ಲಿ ಹೆಚ್ಚಿದ ಬಿಸಿಲು: 800ಕ್ಕೇರಿದ ಸಾವಿನ ಸಂಖ್ಯೆ
ಸಾಂದರ್ಭಿಕ ಚಿತ್ರ
Published On :

ಹೈದರಾಬಾದ್: ದಕ್ಷಿಣ ಭಾರತದ ತೆಲಂಗಾಣ ಹಾಗೂ ಆಂಧ್ರಪದೇಶದಾದ್ಯಂತ ಬಿಸಿಲಿನ ಮರಣ ಮೃದಂಗ ಮಂದುವರೆದಿದ್ದು, ಸಾವಿನ ಸಂಖ್ಯೆ 800ಕ್ಕೇರಿದೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಈ ಎರಡೂ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ನಷ್ಟಿದ್ದು, ಬಿಸಿಲಿನ ಪ್ರಖರತೆ ಹೆಚ್ಚಾಗಿದೆ. ಬಿಸಿಲಿನ ತಾಪಮಾನ ಇನ್ನೂ ಎರಡರಿಂದ ಮೂರು ದಿನಗಳವರೆಗೂ ಮುಂದುವರೆಯಲಿದ್ದು, ತದನಂತರ ಭಾರಿ ಮಳೆ ಸುರಿಯುವ ಸಂಭವವಿದೆ ಎಂದು ವಿಶಾಖಪಟ್ಟಣ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಬಿಸಿಲಿನ ತಾಪಮಾನಕ್ಕೆ ಈಗಾಗಲೇ ನಲುಗಿ ಹೋಗಿರುವ ಆಂಧ್ರಪ್ರದೇಶದ ಜನತೆಗೆ ಸಹಾಯ ಹಸ್ತ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಜನತೆಗೆ ಕುಡಿಯುವ ನೀರು ಮತ್ತು ಮಜ್ಜಿಗೆ ವಿತರಿಸುವಂತೆ ಆದೇಶ ನೀಡಿದ್ದಾರೆ. ಅಲ್ಲದೆ, ಬಿಸಿಲಿನ ತಾಪ ಹೆಚ್ಚಿರುವುದರಿಂದ  ಬೆಳಿಗ್ಗೆ 11 ಗಂಟೆಯಿಂದ ಸಂಜೆ 4.30 ರವರೆಗೆ ಹೊರ ಬರದಂತೆ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.