ಜವಹರಲಾಲ್ ನೆಹರೂ 51ನೇ ಪುಣ್ಯತಿಥಿ
ನಮ್ಮ ದೇಶದ ಪ್ರಥಮ ಪ್ರಧಾನಮಂತ್ರಿ ಜವಹರಲಾಲ ನೆಹರೂರವರ 51ನೇ ಪುಣ್ಯ ತಿಥಿ ದಿನವಾದ ಇಂದು(ಬುಧವಾರ) ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ...

ನವದೆಹಲಿ:ನಮ್ಮ ದೇಶದ ಪ್ರಥಮ ಪ್ರಧಾನಮಂತ್ರಿ ಜವಹರಲಾಲ ನೆಹರೂರವರ 51ನೇ ಪುಣ್ಯ ತಿಥಿ ದಿನವಾದ ಬುಧವಾರ ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ,ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲಾದ ನಾಯಕರು ಇಂದು ಬೆಳಗ್ಗೆ ಯಮುನಾ ನದಿ ತೀರದಲ್ಲಿರುವ ಶಾಂತಿ ವನಕ್ಕೆ ತೆರಳಿ ನೆಹರೂರವರ ಸ್ಮಾರಕಕ್ಕೆ ಅಂತಿಮ ನಮನ ಸಲ್ಲಿಸಿದರು.
ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನೆಹರೂ ಅವರು, ನಮ್ಮ ದೇಶದ ಮೊದಲ ಪ್ರಧಾನಮಂತ್ರಿಯಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಎಂದಿಗೂ ನಮ್ಮ ಮನಸ್ಸಿನಲ್ಲಿ ಉಳಿಯುತ್ತಾರೆ ಎಂದು ಟ್ವೀಟಿಸಿದ್ದಾರೆ.
ನೆಹರೂ ಸ್ಮರಣಾರ್ಥ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಶಾಂತಿವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಭಾಗವಹಿಸಿರಲಿಲ್ಲ.ಕಾಂಗ್ರೆಸ್ ನ ಹಿರಿಯ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನೆಹರೂರವರ ತತ್ವ, ಆದರ್ಶಗಳನ್ನು ಸಾರುವ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು,.
ನವೆಂಬರ್ 14,1889ರಲ್ಲಿ ಜನಿಸಿದ್ದ ನೆಹರೂರವರು, 20ನೇ ಶತಮಾನದಲ್ಲಿ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ಮೇ 27,1964ರಲ್ಲಿ ತಮ್ಮ 74ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


