ದೇಶ

ಗುಜ್ಜರ್ ಪ್ರತಿಭಟನೆ: ರಾಜಸ್ಥಾನ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ 'ಹೈ' ತರಾಟೆ

ಸರ್ಕಾರಿ ನೇಮಕಾತಿಯಲ್ಲಿ ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯ ರೈಲು ಹಾಗೂ ಬಸ್ ತಡೆದು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ...

ಗುಜ್ಜರ್ ಪ್ರತಿಭಟನೆ: ರಾಜಸ್ಥಾನ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ 'ಹೈ' ತರಾಟೆ
ಗುಜ್ಜಾರ್‌ ಸಮುದಾಯದ ಪ್ರತಿಭಟನೆ
Published On :

ಜೈಪುರ:  ಸರ್ಕಾರಿ ನೇಮಕಾತಿಯಲ್ಲಿ ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯ  ರೈಲು ಹಾಗೂ ಬಸ್ ತಡೆದು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಜಸ್ಥಾನ್ ಹೈಕೋರ್ಟ್ ಗುರುವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಪ್ರತಿಭಟನೆಯನ್ನು ತಡೆಯಲು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕೂಡಲೇ ಪ್ರತಿಭಟನಾ ನಿರತರ ವಿರುದ್ಧ ಕ್ರಮ ತೆಗೆದುಕೊಂಡು, ರಸ್ತೆ ಮತ್ತು ರೈಲು ಸಂಚಾರ ಸುಗಮಗೊಳಿಸಬೇಕು ಎಂದು ಕೋರ್ಟ್ ಸೂಚಿಸಿದೆ. ಅಲ್ಲದೆ ಈ ಸಂಬಂಧ ನಾಳೆಯ ಒಳಗೆ ಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಮುಖ್ಯಕಾರ್ಯದರ್ಶಿ ಸಿಎಸ್ ರಾಜನ್ ಮತ್ತು ಡಿಜಿಪಿ ಅವರಿಗೆ ಸೂಚಿಸಿದೆ.

ಪ್ರತಿಭಟನೆಯಿಂದಾಗಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಬಹುದು ಎಂದು ಕಳವಳ ವ್ಯಕ್ತಪಡಿಸಿರುವ ಕೋರ್ಟ್, ಗುಜ್ಜಾರ್ ಸಮುದಾಯದವರ ಪ್ರತಿಭಟನೆಯಿಂದ  ಉಂಟಾದ ನಷ್ಟದ ಬಗ್ಗೆಯೂ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದೆ.

ಕೂಡಲೇ ಪ್ರತಿಭಟನೆ ನಿಲ್ಲಿಸಲು ಸೂಕ್ತ ಕ್ರಮ ಕೈಗೊಂಡು ರಾಜಸ್ಥಾನದಲ್ಲಿ ಶಾಂತಿ ಕಾಪಾಡುವಂತೆ ಕಾಪಾಡುವಂತೆ ಕೋರ್ಟ್ ಸೂಚನೆ ನೀಡಿರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಲಕ್ಷ್ಮಿಕಾಂತ್ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.