ದೇಶ

ಕೋಟಿ ವೆಚ್ಚದಲ್ಲಿ ಪ್ರಧಾನಿ ಮೋದಿ ದೇಗುಲ ನಿರ್ಮಾಣಕ್ಕೆ ಮುಂದಾದ ಅಭಿಮಾನಿ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರವಹಿಸಿಕೊಂಡು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಲಹಾಬಾದ್ ಜಿಲ್ಲೆಯ...

ಕೋಟಿ ವೆಚ್ಚದಲ್ಲಿ ಪ್ರಧಾನಿ ಮೋದಿ ದೇಗುಲ ನಿರ್ಮಾಣಕ್ಕೆ ಮುಂದಾದ ಅಭಿಮಾನಿ
ಪ್ರಧಾನಿ ನರೇಂದ್ರ ಮೋದಿ
Published On :

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರವಹಿಸಿಕೊಂಡು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಲಹಾಬಾದ್ ಜಿಲ್ಲೆಯ ಜಲಾಲ್ ಪುರ ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೇಗುಲವನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಅಭಿಮಾನಿಗಳು ಮುಂದಾಗಿದ್ದಾರೆ.

ಮೋದಿ ಅಭಿಮಾನಿ ಪುಷ್ಪರಾಜ್ ಸಿಂಗ್ ಯಾದವ್ ಎಂಬವರು ಈ ದೇಗುಲ ನಿರ್ಮಾಣಕ್ಕೆ ಮುಂದಾಗಿದ್ದು, ಪ್ರಧಾನಿ ಮೋದಿ ನಮ್ಮ ದೇಶದ ರಾಜ. ನಾವೆಲ್ಲರೂ ಅವರ ಭಕ್ತರು. ದೇಶಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿರುವುದರಿಂದ ಅವರನ್ನು ನಾವು ಪೂಜಿಸುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ 6 ತಿಂಗಳೊಳಗಾಗಿ ಈ ದೇಗುಲ ನಿರ್ಮಾಣ ಪೂರ್ಣಗೊಳ್ಳಲಿದ್ದು, ಇಲ್ಲಿ ಮಾರ್ಬಲ್ ನಿಂದ ರಚಿಸುವ ಮೋದಿಯವರ ಎರಡೂವರೆ ಎತ್ತರದ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.