ಸಶಸ್ತ್ರ ಪಡೆ ಮಹಿಳೆಯರಿಗೆ ಇಲ್ಲ ಯುದ್ಧಾವಕಾಶ
ಸಶಾಸ್ತ್ರ ಪಡೆಗಳಲ್ಲಿ ಯುದ್ಧ ಕಾರ್ಯಾಚರಣೆಗೆ ಮಹಿಳೆಯರನ್ನು ನೇಮಕ ಮಾಡಲಾಗುವುದು ಎಂಬ ಸುದ್ದಿಯನ್ನು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಳ್ಳಿಹಾಕಿದ್ದಾರೆ. ಅವರ ಸುರಕ್ಷೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ...

ಪುಣೆ: ಸಶಾಸ್ತ್ರ ಪಡೆಗಳಲ್ಲಿ ಯುದ್ಧ ಕಾರ್ಯಾಚರಣೆಗೆ ಮಹಿಳೆಯರನ್ನು ನೇಮಕ ಮಾಡಲಾಗುವುದು ಎಂಬ ಸುದ್ದಿಯನ್ನು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ತಳ್ಳಿಹಾಕಿದ್ದಾರೆ. ಅವರ ಸುರಕ್ಷೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಂದು ವೇಳೆ ಯುದ್ಧದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಶತ್ರು ಪಡೆಗಳಿಗೆ ಸೆರೆಸಿಕ್ಕರೆ ಅವರ ಪರಿಸ್ಥಿತಿ ಏನಾಗಬಹುದು ಎಂದು ನೀವೇ ಯೋಚಿಸಿ ಎಂದಿರುವ ಸಚಿವರು, ಯುದ್ಧ ಹೊರತು ಪಡಿಸಿ ಉಳಿದ ಎಲ್ಲ ಕಾರ್ಯಾಚರಣೆಗಳಲ್ಲೂ ಮಹಿಳೆಯರು ಪಾಲ್ಗೊಳ್ಳುವಂತೆ ಪ್ರೇರೇಪಿಸಲಾಗುವುದು ಎಂದಿದ್ದಾರೆ.
ಹಂತ ಹಂತವಾಗಿ ವಿವಿಧ ಕಾರ್ಯಾಚರಣೆಯಲ್ಲಿ ಮಹಿಳೆಯರನ್ನೂ ಸೇರ್ಪಡೆಗೊಳಿಸಲಾಗುವುದು ಎಂದೂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


