ದಯಾ ಮರಣಕ್ಕೆ ಅನುಮತಿ ನೀಡಿ: ನೊಂದ ತಂದೆಯಿಂದ ರಾಷ್ಟ್ರಪತಿಗೆ ಅರ್ಜಿ
ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಭರಿಸಲಾಗದ ತಂದೆಯೊಬ್ಬರು ದಯಾ ಮರಣಕ್ಕೆ ಒಪ್ಪಿಗೆ ನೀಡುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ...
ನವದೆಹಲಿ: ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಭರಿಸಲಾಗದ ತಂದೆಯೊಬ್ಬರು ದಯಾಮರಣಕ್ಕೆ ಒಪ್ಪಿಗೆ ನೀಡುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಮೊಹಮದ್ ನಜೀರ್ ಎಂಬುವವರಿಗೆ 6 ಮಕ್ಕಳಿದ್ದೂ, ಆರು ಮಕ್ಕಳೂ ಅಪರೂಪದ ನರಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಖಾಯಿಲೆಯಿಂದಾಗಿ ಮಕ್ಕಳ ಹೊಟ್ಟೆಯ ಕೆಳಭಾಗದ ಎಲ್ಲಾ ಅಂಗಾಂಗಳು ಪಾರ್ಶ್ವವಾಯುವಿಗೆ ತುತ್ತಾಗಿವೆ. ದಿನದಿಂದ ದಿನಕ್ಕೆ ಮಕ್ಕಳ ಆರೋಗ್ಯ ಹದಗೆಡುತ್ತಿದೆ. ಹೀಗಾಗಿ ಚಿಕಿತ್ಸೆ ವೆಚ್ಚ ಭರಿಸಲಾಗದ ತಂದೆಯೊಬ್ಬರು ಮಕ್ಕಳು ಪಡುತ್ತಿರುವ ರೋಧನೆಯನ್ನು ನೋಡಲಾಗದೆ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಪತ್ರದಲ್ಲಿ ಮೊಹಮದ್ ನಜೀರ್ ಅವರು ಮಕ್ಕಳ ಖಾಯಿಲೆ ಕುರಿತಂತೆ ಹಾಗೂ ಮಕ್ಕಳ ಕಷ್ಟಗಳ ಕುರಿತಂತೆ ವಿವರಣೆ ನೀಡಿದ್ದು, ಮಕ್ಕಳಿಗೆ ದಯಾ ಮರಣಕ್ಕೆ ಒಪ್ಪಿಗೆ ನೀಡುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.
ಇತರೆ ಮಕ್ಕಳಂತೆ ಓಡಾಡಲು, ಆಟವಾಡಲು ಸಾಧ್ಯವಾಗದೆ ಪ್ರತಿನಿತ್ಯ ನೋವಿನಿಂದ ಬಳಲುತ್ತಿರುತ್ತಾರೆ. ಇನ್ನು ಕೆಲವು ದಿನಗಳ ನಂತರ ಮಕ್ಕಳಿಗೆ ಹೃದಯ ಸಂಬಂಧಿ ತೊಂದರೆ ಕಾಣಿಸಲಿದ್ದು, ರೋಗವನ್ನು ಗುಣಪಡಿಸಲು ಚಿಕಿತ್ಸೆ ಇದೆ ಎಂದು ವೈದ್ಯರು ಹೇಳುತ್ತಾರೆ. ಆದರೆ ಮಕ್ಕಳ ರೋಗವನ್ನು ಗುಣಪಡಿಸುವಷ್ಟು ಹಣ ನನ್ನ ಬಳಿಯಿಲ್ಲ. ಹಾಗಾಗಿ ಮಕ್ಕಳು ಪ್ರತಿನಿತ್ಯ ನೋವಿನಿಂದ ಚೀರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ. ದಯಾಮರಣಕ್ಕೆ ಅನುಮತಿ ನೀಡುವಂತೆ ಮೊಹಮದ್ ನಜೀರ್ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

