ನಿರ್ಭಯಾಗೆ ಸೂಕ್ತ ನ್ಯಾಯ ಸಿಕ್ಕಿಲ್ಲ: ಮನೇಕಾ ಗಾಂಧಿ
ದೆಹಲಿ ಗ್ಯಾಂಗ್‍ರೇಪ್‍ನಲ್ಲಿ ಭಾಗಿಯಾಗಿರುವ ಬಾಲಾರೋಪಿ ಮುಂದಿನ ತಿಂಗಳು ಜೈಲಿಂದ ಬಿಡುಗಡೆಯಾಗಲಿದ್ದಾನೆ. ಅದಕ್ಕೆ ಪೂರಕವಾಗಿ ಸೋಮವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ``ನಿರ್ಭಯಾಗೆ...

ನವದೆಹಲಿ: ದೆಹಲಿ ಗ್ಯಾಂಗ್‍ರೇಪ್‍ನಲ್ಲಿ ಭಾಗಿಯಾಗಿರುವ ಬಾಲಾರೋಪಿ ಮುಂದಿನ ತಿಂಗಳು ಜೈಲಿಂದ ಬಿಡುಗಡೆಯಾಗಲಿದ್ದಾನೆ. ಅದಕ್ಕೆ ಪೂರಕವಾಗಿ ಸೋಮವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ``ನಿರ್ಭಯಾಗೆ ಸೂಕ್ತ ನ್ಯಾಯ ಒದಗಿಸಿಕೊಟ್ಟಂತೆ ಆಗಲಿಲ್ಲ.
ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಬಾಲಾರೋಪಿ ಮೇಲೆ ಹೆಚ್ಚಿನ ನಿಗಾ ಇರಿಸಬೇಕು. ಆತ ಮತ್ತೊಂದು ಹೀನ ಕೃತ್ಯ ಎಸಗುವ ವರೆಗೆ ಕಾಯುವಂತಾಗಬಾರದು. ಈ ಬಗ್ಗೆ ಸಂಬಂಧಿತ ಅಧಿಕಾರಿಗಳ ಜತೆ ಚರ್ಚಿಸುತ್ತೇನೆ'' ಎಂದಿದ್ದಾರೆ. ಅತ್ಯಾಚಾರ ಮತ್ತು ಕೊಲೆಯಂಥ ಹೀನ ಕೃತ್ಯ ಎಸಗಿದರೂ ಆತನಿಗೆ ಕಠಿಣ ಶಿಕ್ಷೆ ವಿಧಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗು ತಮಗೆ ಇದೆ ಎಂದೂ ಹೇಳಿದ್ದಾರೆ.
ಇದೇ ವೇಳೆ ಮನೇಕಾ ಹೇಳಿಕೆಗೆ ಬಾಲಾರೋಪಿ ಹೆತ್ತವರು ಆಕ್ಷೇಪಿಸಿದ್ದಾರೆ. ಜೈಲಿಗೆ ಹೋದ ಬಳಿಕ ಆತನಲ್ಲಿ ಸುಧಾರಣೆಯಾಗಿದೆಯೇ, ದೇಶದಲ್ಲಿ ಸಾವಿರಾರು ಹೆಣ್ಣುಮಕ್ಕಳ ಅತ್ಯಾಚಾರ ನಡೆಯುತ್ತಿದೆ. ಏನಾದರೂ ಪರಿಸ್ಥಿತಿ ಸುಧಾರಣೆಯಾಗಿದೆಯೇ''ಎಂದು ಬಾಲಾರೋಪಿಯ ತಾಯಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


