ದೇಶ

ಶಾರದ ಚಿಟ್ ಫಂಡ್ ಹಗರಣ: ಮದನ್ ಮಿತ್ರಾ ಆಸ್ಪತ್ರೆಗೆ ದಾಖಲು

ಶಾರದ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಸಚಿವಾರಗಿದ್ದ ಮದನ್ ಮಿತ್ರಾ ಅನಾರೋಗ್ಯದ...

ಶಾರದ ಚಿಟ್ ಫಂಡ್ ಹಗರಣ: ಮದನ್ ಮಿತ್ರಾ ಆಸ್ಪತ್ರೆಗೆ ದಾಖಲು
ಮದನ್ ಮಿತ್ರಾ
Published On :
ಕೊಲ್ಕತಾ: ಶಾರದ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಸಚಿವಾರಗಿದ್ದ ಮದನ್ ಮಿತ್ರಾ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮದನ್ ಮಿತ್ರಾ ಅವರಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಹೈಕೋರ್ಟ್ ಮೊರೆ ಹೋಗುತ್ತಿದ್ದಂತೆ ಇತ್ತ ಮದನ್ ಮಿತ್ರಾ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮದನ್ ಅವರನ್ನು ಭೋವಾನಿಪೋರ್ ಪ್ರದೇಶದಲ್ಲಿರುವ ಅವರ ನಿವಾಸದಿಂದ ಆ್ಯಂಬಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವುಂಡ್ ಲ್ಯಾಂಡ್ ಆಸ್ಪತ್ರೆಗೆ ಇಂದು ಬೆಳಿಗ್ಗೆ 10.30ಕ್ಕೆ ಮದನ್ ಮಿತ್ರಾ ಅವರು ದಾಖಲಾಗಿದ್ದಾರೆ. 
ಅಲಿಪೋರ್ ಕೋರ್ಟ್ ಮಿತ್ರಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಹಾಗೂ ಮದನ್ ಮಿತ್ರಾ ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೋರಿ ಸಿಬಿಐ ಇಂದು ಬೆಳಿಗ್ಗೆ ಹೈಕೋರ್ಟ್ ಮೊರೆ ಹೋಗಿತ್ತು. 
ಶಾರದಾ ಚಿಟ್ ಫಂಡ್ ಹಗರಣದಲ್ಲಿ ಒಳಸಂಚು, ಅಧಿಕಾರ ದುರುಪಯೋಗ, ಹಣ ಹೂಡಿಕೆ ಮುಂತಾದ ಮೇಲ್ನೋಟ ವಿಚಾರಗಳಿಗೆ ಸಂಬಂಧಿಸಿದಂತೆ ಮದನ್ ಮಿತ್ರಾ ಅವರನ್ನು 2014ರ ಡಿಸೆಂಬರ್ ತಿಂಗಳಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.