ಛೋಟಾ ರಾಜನ್ ಬಂಧನದ ನಂತರ ಪಾಕ್ ನಲ್ಲಿ ದಾವೂದ್ ಗೆ ಹೆಚ್ಚಿನ ಭದ್ರತೆ
ಛೋಟಾ ರಾಜನ್ ಬಂಧನದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಭದ್ರತೆ ಹೆಚ್ಚಿಸಲಾಗಿದೆ...

ನವದೆಹಲಿ: ಇಂಡೋನೇಶಿಯಾದ ಬಾಲಿಯಲ್ಲಿ ಛೋಟಾ ರಾಜನ್ ಬಂಧನದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿರುವ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಭದ್ರತೆ ಹೆಚ್ಚಿಸಲಾಗಿದೆ.
1993ರ ಮುಂಬಯಿ ಸರಣಿ ಸ್ಫೋಟದ ನಂತರ ಭಾರತದಿಂದ ಪರಾರಿಯಾಗಿರುವ ದಾವೂದ್, ಸುಮಾರು 2 ದಶಕಗಳಿಂದ ಪಾಕಿಸ್ತಾನದಲ್ಲಿ ಅಡಗಿಕುಳಿತಿದ್ದಾನೆ. ಇಸ್ಲಮಾಬಾದ್ ಮತ್ತು ಕರಾಚಿಯಲ್ಲಿರುವ ದಾವೂದ್ ನಿವಾಸಗಳಿಗೆ ಪಾಕಿಸ್ತಾನ ಭದ್ರತೆಗಾಗಿ ವಿಶೇಷ ಕಮಾಂಡೋಗಳನ್ನು ನಿಯೋಜಿಸಿದ್ದಾರೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ.
ಇನ್ನು ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಬಂಧಿತ ಛೋಟಾ ರಾಜನ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇಲ್ಲ ಎಂದು ಪಾಕಿಸ್ತಾನ ವಾದ ಮಾಡುತ್ತಿದೆ. ಗೃಹ ಸಚಿವ ರಾಜನಾಥ್ ಸಿಂಗ್ ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ. ಆದರೆ ಆ ದೇಶದೊಳಗಿದ್ದುಕೊಂಡೇ ಪದೇ ಪದೇ ವಾಸ್ತವ್ಯ ಬದಲಿಸುತ್ತಿದ್ದಾನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


