ಎಲ್ಲಿದೆ ಅಸಹಿಷ್ಣುತೆ? ಭಾರತದಲ್ಲಿ ಅಸಹಿಷ್ಣುತೆ ಇಲ್ಲ: ಅರುಣ್ ಜೇಟ್ಲಿ
ದೇಶದಲ್ಲಿ ಎಲ್ಲಿದೆ ಅಸಹಿಷ್ಣುತೆ? ದೇಶದಲ್ಲಿ ಇದೀಗ ಶಾಂತಿ ಹಾಗೂ ಸಾಮರಸ್ಯವಿದ್ದು, ಭಾರತದಲ್ಲಿ ಅಸಹಿಷ್ಣುತೆ ಇಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ದೇಶದಲ್ಲಿ ಎಲ್ಲಿದೆ ಅಸಹಿಷ್ಣುತೆ? ದೇಶದಲ್ಲಿ ಇದೀಗ ಶಾಂತಿ ಹಾಗೂ ಸಾಮರಸ್ಯವಿದ್ದು, ಭಾರತದಲ್ಲಿ ಅಸಹಿಷ್ಣುತೆ ಇಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಸಾಹಿತಿಗಳ ಹತ್ಯೆ ಹಾಗೂ ಅಸಹಿಷ್ಣುತೆ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕರು ನಿನ್ನೆಯಷ್ಟೇ ಕಾಲ್ನಡಿಗೆ ಮೂಲಕ ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಪ್ರತಿಕ್ರಿಯೆ ನೀಡಿರುವ ಅರುಣ್ ಜೇಟ್ಲಿ ಅವರು, ದೇಶದಲ್ಲಿ ಇದೀಗ ಶಾಂತಿ ಹಾಗೂ ಸಾಮರಸ್ಯವಿದೆ. ಈ ಹಿಂದೆ ನಡೆದಂತಹ ಘಟನೆಗಳು ಮತ್ತೆ ದೇಶದಲ್ಲಿ ನಡೆಯಬಾರದು. ಹಿಂದೆ ನಡೆದ ಘಟನೆಗಳನ್ನೇ ಹಿಡಿದು ಮತ್ತೆ ದೇಶದಲ್ಲಿ ಗಲಭೆ ಸೃಷ್ಟಿಸುವ ಕೆಲಸವನ್ನು ಯಾವ ಪಕ್ಷದವರೂ ಮಾಡಬಾರದು. ದೇಶದಲ್ಲಿ ಅಸಹಿಷ್ಣುತೆಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಪಕ್ಷದವರು ಎಲ್ಲಿ ಅಸಹಿಷ್ಣುತೆಯ ವಾತಾವರಣವಿದೆ ಎಂದು ಹೇಳಲಿ. ದಾದ್ರಿ ಪ್ರಕರಣ ಹಾಗೂ ಸಾಹಿತಿ ಹತ್ಯೆ ಪ್ರಕರಣ ನಡೆದದ್ದು, ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


