ದೇಶ

ಬಿಜೆಪಿ ಕಾರ್ಪೊರೇಟರ್'ಗೆ ಗುಂಡೇಟು: ಸಾವು

ಬಿಜೆಪಿ ಕಾರ್ಪೊರೇಟರ್ ಶಿವಸೇತ್ ಅವರಿಗೆ ದುರ್ಷರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆಯೊಂದು ವಾರಣಾಸಿಯ ತುಳಸಿಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ...

ಬಿಜೆಪಿ ಕಾರ್ಪೊರೇಟರ್'ಗೆ ಗುಂಡೇಟು: ಸಾವು
(ಸಾಂದರ್ಭಿಕ ಚಿತ್ರ)
Published On :

ವಾರಣಾಸಿ: ಬಿಜೆಪಿ ಕಾರ್ಪೊರೇಟರ್ ಶಿವಸೇತ್ ಅವರಿಗೆ ದುರ್ಷರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆಯೊಂದು ವಾರಣಾಸಿಯ ತುಳಸಿಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ವಾರಣಾಸಿಯ ರಾಂಪುರದ ಕಾರ್ಪೊರೇಟರ್ ಆಗಿರುವ ಶಿವ ಸೇಥ್ (40) ಅವರು, ನಿನ್ನೆ ರಾತ್ರಿ ಕಕರ್ಮಟ್ಟಾ ಪ್ರದೇಶದಿಂದ ರಾಂಪುರದಲ್ಲಿರುವ ತಮ್ಮ ನಿವಾಸಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದಿರುವ ದುಷ್ಕರ್ಮಿಗಳು ಶಿವ ಸೇಥ್ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆಂದು ಅಧಿಕಾರಿ ಹೇಳಿದ್ದಾರೆ.

ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಶಿವ ಸೇಥ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಅನಾಮಿಕ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿರುವ ಭಾಗಲ್ಪುರ ಪೊಲೀಸರು ತನಿಖೆ ನಡೆಸುತ್ತಿದ್ದು, ಶಿವ ಸೇಥ್ ಅವರ ದೇಹವನ್ನು ಶವ ಪರೀಕ್ಷೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.