ಪ್ರವಾಸ ಮುಗಿಸಿ ಬರದಿದ್ರೆ ಕೆಲಸಕ್ಕೆ ಕುತ್ತು: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಎಚ್ಚರಿಕೆ
ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶ ಪ್ರವಾಸ ಕೈಗೊಂಡು, ಅವಧಿಗಿಂತ ಹೆಚ್ಚು ಕಾಲ ತಂಗಿದರೆ ಅಥವಾ ಅನುಮತಿ ಇಲ್ಲದೆ...

Published On :
ನವದೆಹಲಿ: ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶ ಪ್ರವಾಸ ಕೈಗೊಂಡು, ಅವಧಿಗಿಂತ ಹೆಚ್ಚು ಕಾಲ ತಂಗಿದರೆ ಅಥವಾ ಅನುಮತಿ ಇಲ್ಲದೆ ರಜೆಯಲ್ಲಿ ತೆರಳಿದರೆ ಅವರ ಉದ್ಯೋಗಕ್ಕೇ ಕುತ್ತು ಬಂದೀತು. ಕೇಂದ್ರ ಸರ್ಕಾರ ಈ ಬಗ್ಗೆ ಹೊಸತಾಗಿ ನಿಯಮಗಳನ್ನು ಪರಿಷ್ಕರಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಕೆಲವು ಅಧಿಕಾರಿಗಳು ನಿಯಮ ಮೀರಿ ತಂಗಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂಥ ನಿಯಮ ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈಗಾಗಲೇ 10 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ದೂರು ಸಲ್ಲಿಕೆಯಾಗಿದೆ.
ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಐಎಎಸ್, ಐಪಿಎಸ್, ಭಾರತೀಯ ಅರಣ್ಯ ಸೇವಾ ಅಧಿಕಾರಿಗಳ ಕ್ರಮ ಕೈಗೊಳ್ಳಲು ಅಸಾಧ್ಯವಾದರೆ, ಕೇಂದ್ರ ಸರ್ಕಾರವೇ ಪರಿಗಣಿತ ರಾಜಿ ನಾಮೆ (ಡೀಮ್ಡ್ ರೆಸಿಗ್ನೇಷನ್)ಕೇಳುವ ಅವಕಾಶ ಹೊಸ ನಿಯಮಾವಳಿಯಲ್ಲಿದೆ.
ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಕೂಡ ಎಎಸ್, ಐಪಿಎಸ್ ಮತ್ತು ಭಾರತೀಯ ಅರಣ್ಯ ಸೇವಾ ಅಧಿಕಾರಿಗಳು ವಿದೇಶಗಳಲ್ಲಿ ಅಥವಾ ಅನುಮತಿ ಪಡೆದು ಅಧ್ಯಯನ ಮತ್ತು ಇತರ ಅಧಿಕೃತ ಕಾರ್ಯಕ್ರಮಗಳ ಬಳಿಕ ಕರ್ತವ್ಯಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು.
ಒಂದು ತಿಂಗಳ ಕಾಲ ಪ್ರತಿಕ್ರಿಯೆ ನಿರೀಕ್ಷಿಸಿ ಆ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನಿಯಮದಲ್ಲಿ ಉಲ್ಲೇಖಿಸಲಾಗಿದೆ. ಯಾವ ರಾಜ್ಯದ ಕೇಡರ್‍ಗೆ ಅಧಿಕಾರಿ ಸೇರಿರುತ್ತಾನೆ. ಅದರ ಮೂಲಕ ಆತನಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


