ಮತ್ತೊಂದು ದಾದ್ರಿ: ಮದ್ರಸಾ ಮುಖ್ಯ ಶಿಕ್ಷಕನ ಕೊಂದ ಗುಂಪು
ದಾದ್ರಿ ಘಟನೆಯು ದೇಶಾದ್ಯಂತ ವಿವಾದವೆಬ್ಬಿಸಿರುವ ನಡುವೆಯೇ ಇಂಫಾಲ್‍ನಲ್ಲಿ ಕರು ಕದ್ದಿದ್ದಾರೆಂಬ ಆರೋಪದಲ್ಲಿ...

Published On :
ನವದೆಹಲಿ: ದಾದ್ರಿ ಘಟನೆಯು ದೇಶಾದ್ಯಂತ ವಿವಾದವೆಬ್ಬಿಸಿರುವ ನಡುವೆಯೇ ಇಂಫಾಲ್‍ನಲ್ಲಿ ಕರು ಕದ್ದಿದ್ದಾರೆಂಬ ಆರೋಪದಲ್ಲಿ ಮದರಸಾದ ಹೆಡ್‍ಮಾಸ್ಟರ್‍ವೊಬ್ಬರನ್ನು ಹತ್ಯೆಗೈದ ಆಘಾತಕಾರಿ ಘಟನೆ ವರದಿಯಾಗಿದೆ.
ಮದರಸಾದ ಮುಖ್ಯಶಿಕ್ಷಕ ಮೊಹಮ್ಮದ್ ಹಸ್ಮದ್ ಅಲಿ(55) ಅವರ ಮೃತದೇಹವು ಕೈರಾವೋ ಮಕೇಟಿಂಗ್ ಗ್ರಾಮದಲ್ಲಿ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಘಟನೆ?: ಗ್ರಾಮದ ಶೆಡ್‍ವೊಂದರಲ್ಲಿ 2 ದಿನಗಳ ಹಿಂದೆ ಕರುವೊಂದು ಕಾಣೆಯಾಗಿತ್ತು. ಇದರ ಬೆನ್ನಲ್ಲೇ ಹಸ್ಮದ್ ಅಲಿ ಅವರು ಕರುವೊಂದನ್ನು ಹಿಡಿದುಕೊಂಡು ಸಾಗುತ್ತಿರುವುದನ್ನು ನೋಡಿದ ಗುಂಪೊಂದು, ಅಲಿ ಅವರ ಮೇಲೆ ಗಂಭೀರ ಹಲ್ಲೆ ನಡೆಸಿ ಕೊಂದು ಹಾಕಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಲಿ ಅವರ ಮೃತದೇಹವು ಅವರ ಮನೆಯಿಂದ 5 ಕಿ.ಮೀ. ದೂರದಲ್ಲಿ ಪತ್ತೆಯಾಗಿದ್ದು, ಈ ಘಟನೆಯು ಮಣಿಪುರದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಕೈರಾವೋ ಉದ್ವಿಗ್ನ: ಘಟನೆಯು ಬೆಳಕಿಗೆ ಬರುತ್ತಿದ್ದಂತೆ, ಕೈರಾವೋ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವವರೆಗೂ ಮೃತ ಅಲಿ ಅವರ ಅಂತ್ಯಸಂಸ್ಕಾರ ಮಾಡುವುದಿಲ್ಲ ಮುಸ್ಲಿಂ ಸಂಘಟನೆಯೊಂದು ಪಟ್ಟು ಹಿಡಿದು ಕುಳಿತಿದೆ. ಅಲ್ಲದೆ, ಗುರುವಾರ ರಾಜ್ಯವ್ಯಾಪಿ ಬಂದ್‍ಗೂ ಕರೆ ನೀಡಿದೆ. `ಅಲಿ ಅವರು ತುಂಬಾ ಮೃದು ಸ್ವಭಾವದ, ಪ್ರಾಮಾಣಿಕ ಶಿಕ್ಷಕರು. ಅವರನ್ನು ಮಾಡದ ತಪ್ಪಿಗಾಗಿ ಕೊಲ್ಲಲಾಗಿದೆ.
ಕೃತ್ಯ ಎಸಗಿದವರು ಯಾರೆಂದು ಪೊಲೀಸರಿಗೆ ಗೊತ್ತಿದೆ. ಆದರೂ ಕ್ರಮ ಕೈಗೊಳ್ಳುತ್ತಿಲ್ಲ. ನ್ಯಾಯ ಸಿಗುವವರೆಗೂ ನಾವು ಅಂತ್ಯಸಂಸ್ಕಾರ ಮಾಡುವುದಿಲ್ಲ' ಎಂದು ಅಲಿ ಕೊಲೆಗೆ ಸಂಬಂಧಿಸಿದ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಮೊಹಮ್ಮದ್ ರಜಾವುದ್ದೀನ್ ತಿಳಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಟ್ವೀಟ್ ವಾಪಸ್ ತೆಗೆದುಕೊಂಡ ಬಿಜೆಪಿ ನಾಯಕ `ಶಾರುಖ್ ಖಾನ್‍ರ ದೇಹ ಮಾತ್ರ ಭಾರತದಲ್ಲಿದೆ, ಮನಸ್ಸು ಪಾಕಿಸ್ತಾನದಲ್ಲಿದೆ' ಎಂಬ ತಮ್ಮ ಟ್ವೀಟ್ ವಿವಾದ ಸೃಷ್ಟಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ, ಟ್ವೀಟ್ ಅನ್ನು ವಾಪಸ್ ತೆಗೆದುಕೊಂಡಿದ್ದಾರೆ. `ಯಾರಿಗೂ ನೋವುಂಟುಮಾಡುವ ಉದ್ದೇಶ ನನ್ನದಲ್ಲ' ಎಂದೂ ಹೇಳಿದ್ದಾರೆ.
ಅಷ್ಟೇ ಅಲ್ಲ, `ಭಾರತದಲ್ಲಿ ಅಸಹಿಷ್ಣುತೆ ಇದ್ದಿದ್ದರೆ, ಶಾರುಖ್ ಅವರು ಅಮಿತಾಭ್‍ರ ನಂತರದ ಅತಿದೊಡ್ಡ ಸ್ಟಾರ್ ಆಗುತ್ತಿರಲಿಲ್ಲ' ಎಂದೂ ಅವರು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ, ವಿಜಯವರ್ಗೀಯ ಅವರ ಟ್ವೀಟ್ ವಿವಾದದಿಂದ ದೂರ ಉಳಿದಿರುವ ಬಿಜೆಪಿ, ಅದು ಪಕ್ಷದ ಅಭಿಪ್ರಾಯವಲ್ಲ ಎಂದಿದೆ.
ಹೋಲಿಸಿದ್ದು ಸರಿಯಲ್ಲವೆಂದ ಸಂಘ: ಆರೆಸ್ಸೆಸ್ ಅನ್ನು ಐಎಸ್ ಉಗ್ರ ಸಂಘಟನೆಗೆ ಹೋಲಿಸಿದ್ದಕ್ಕೆ ಆರೆಸ್ಸೆಸ್‍ನ ತೆಲಂಗಾಣ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತವು ಎಲ್ಲ ರೀತಿಯ ಪ್ರತ್ಯೇಕತಾವಾಗಿ ಸಿದ್ಧಾಂತವನ್ನು ವಿರೋಧಿಸುತ್ತದೆ. ಒಂದು ವೇಳೆ ಆರೆಸ್ಸೆಸ್, ಐಎಸ್‍ನಂತಹ ಮನಸ್ಥಿತಿ ಹೊಂದಿದ್ದರೆ ಈ ಪ್ರಜಾಸತ್ತಾತ್ಮಕ ದೇಶದಲ್ಲಿ ಇಷ್ಟು ವರ್ಷ ಉಳಿಯುತ್ತಲೇ ಇರಲಿಲ್ಲ.
ಭಾರತದಲ್ಲಿ ಇಂತಹ ಸಿದ್ಧಾಂತ ಯಾವತ್ತೂ ಉಳಿಯುವುದೂ ಇಲ್ಲ. ಆರೆಸ್ಸೆಸ್ ವಸುದೈವ ಕುಟುಂಬಕಂ ಎಂಬ ನೀತಿಯನ್ನು ಅನುಸರಿಸುತ್ತಿದೆ. ಅದನ್ನು ಐಎಸ್‍ಗೆ ಹೋಲಿಸುವುದು ಸರಿಯಲ್ಲ ಎಂದೂ ಹೇಳಿದ್ದಾರೆ ಚಂದ್ರಶೇಖರ್.
ದೆಹಲಿ ಪೊಲೀಸರಿಗೆ ಬಿಸಿ: ಕೇರಳ ಹೌಸ್ ಬೀಫ್ ವಿವಾದಕ್ಕೆ ಸಂಬಂಧಿಸಿ ದೆಹಲಿ ಪೊಲೀಸರಿಗೆ ತೀವ್ರ ಹಿನ್ನಡೆಯಾಗಿದೆ. ಕೇರಳ ಭವನಕ್ಕೆ ದಾಳಿ ನಡೆಸುವಾಗ ಪೊಲೀಸರು ಸೂಕ್ತ ನಿಬಂಧನೆಗಳನ್ನು ಪಾಲಿಸಿಲ್ಲ ಎಂದು ನಗರದ ಪಶುಸಂಗೋಪನೆ ಇಲಾಖೆ ನೀಡಿದ ವರದಿ ತಿಳಿಸಿದೆ.
ಬುಧವಾರ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‍ರಿಗೆ ವರದಿ ಸಲ್ಲಿಸಿದ ಇಲಾಖೆಯು, `ದೆಹಲಿ ಪೊಲೀಸರು ಕೇರಳ ಭವನಕ್ಕೆ ಭದ್ರತೆ ನೀಡಲೆಂದು ಹೋಗುವ ಬದಲು, ಅಲ್ಲಿ ಬೀಫ್ ಇದೆಯೇ ಎಂದು ಪರಿಶೀಲಿಸಲು ತೆರಳಿದ್ದರು.
ಒಂದು ಬಾರಿ ಅಡುಗೆ ಮನೆಯಲ್ಲಿ ಬೀಫ್ ಬಗ್ಗೆ ಪರಿಶೀಲಿಸಿ ಇಲ್ಲವೆಂದು ಖಾತ್ರಿಯಾದ ಬಳಿಕ ವಾಪಸ್ ಹೋದರು. 15-20 ನಿಮಿಷ ಬಿಟ್ಟು ಮತ್ತೆ ಬಂದು ಪರಿಶೀಲನೆ ನಡೆಸಿದರು. ಈ ಮೂಲಕ ಪೊಲೀಸರು ಎಲ್ಲ ನಿಬಂಧನೆಗಳನ್ನು ಗಾಳಿಗೆ ತೂರಿದರು' ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


