ಪಾಕಿಸ್ತಾನದಲ್ಲಿ ಕಾರ್ಖಾನೆ ಕುಸಿತ: 18 ಸಾವು, 75 ಗಾಯ
ಕಾರ್ಖಾನೆಯೊಂದು ನೆಲಕ್ಕೆ ಕುಸಿದ ಪರಿಣಾಮ ಸ್ಥಳದಲ್ಲಿದ್ದ 18 ಮಂದಿ ಸಾವನ್ನಪ್ಪಿದ್ದು, 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪೂರ್ವ ಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ನಡೆದಿದೆ ಎಂದು ವರದಿಗಳು ತಿಳಿಸಿವೆ...

ಲಾಹೋರ್: ಕಾರ್ಖಾನೆಯೊಂದು ನೆಲಕ್ಕೆ ಕುಸಿದ ಪರಿಣಾಮ ಸ್ಥಳದಲ್ಲಿದ್ದ 18 ಮಂದಿ ಸಾವನ್ನಪ್ಪಿದ್ದು, 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪೂರ್ವ ಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಕಾರ್ಖಾನೆಯು ನಾಲ್ಕು ಹಂತದ ಕಟ್ಟಡವಾಗಿದ್ದು, ಹಲವು ಕಾರ್ಮಿಕರು ಕಾರ್ಖಾನೆಯೊಳಗೆ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕಾರ್ಖಾನೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲೇ 18 ಮಂದಿ ಸಾವನ್ನಪ್ಪಿದ್ದು, 75 ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಅವಶೇಷಗಳಡಿ 150ಕ್ಕೂ ಹೆಚ್ಚು ಮಂದಿ ಸಿಲುಕಿರುವುದಾಗಿ ಹಲವು ಶಂಕೆಗಳು ವ್ಯಕ್ತವಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಖಾನೆ ಕುಸಿತಕ್ಕೆ ಕಾರಣ ಈವರೆಗೂ ತಿಳಿದುಬಂದಿಲ್ಲ.
ಅಪಾಯದಿಂದ ಪಾರಾಗಿರುವ ಕೆಲವು ಕಾರ್ಮಿಕರು ತಮ್ಮ ಸಹ ಕಾರ್ಮಿಕರು ಈಗಾಗಲೇ ಕರೆ ಮಾಡಿದ್ದು, ಮೂರರಿಂದ ನಾಲ್ಕು ಜನ ಕಟ್ಟಡದ ಒಳಗೆ ಸಿಲುಕಿರುವುದಾಗಿ ಹೇಳಿದ್ದಾರೆಂದು ಅಧಿಕಾರಿಗಳಿಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


