ಪವನ್ ಹನ್ಸ್ ಕಾಪ್ಟರ್ ಪತನ
ಒಎನ್‍ಜಿಸಿ ಘಟಕದಿಂದ ಟೇಕ್ ಆಫ್ ಆದ ಪವನ್ ಹನ್ಸ್ ಹೆಲಿಕಾಪ್ಟರ್ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ಮುಂಬೈ ಕರಾವಳಿ...

Published On :
ಮುಂಬೈ: ಒಎನ್‍ಜಿಸಿ ಘಟಕದಿಂದ ಟೇಕ್ ಆಫ್ ಆದ ಪವನ್ ಹನ್ಸ್ ಹೆಲಿಕಾಪ್ಟರ್ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ಮುಂಬೈ ಕರಾವಳಿಯಾಚೆ ಬುಧವಾರ ಸಂಭವಿಸಿದೆ.
ಕಾಪ್ಟರ್‍ನಲ್ಲಿದ್ದ ಇಬ್ಬರು ಪೈಲಟ್‍ಗಳು ನಾಪತ್ತೆಯಾಗಿದ್ದು, ಮೃತಪಟ್ಟಿರುವ ಸಾಧ್ಯತೆಯಿದೆ. ಪತನಗೊಂಡ ಕಾಪ್ಟರ್ ಇನ್ನೂ ಪತ್ತೆಯಾಗಿಲ್ಲ. ಟೇಕ್ ಆಫ್ ಆದ ಬಳಿಕ ಕಾಪ್ಟರ್ ಒಎನ್‍ಜಿಸಿ ತೈಲ ಬಾವಿಯೊಳಕ್ಕೆ ಬಿದ್ದಿರುವ ಸಾಧ್ಯತೆಯೂ ಇದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಕರಾವಳಿ ರಕ್ಷಕ ಪಡೆ ಮತ್ತು ಒಎನ್‍ಜಿಸಿ ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದೆ. ಕಾಪ್ಟರ್ ಪತನಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಘಟನೆ ವೇಳೆ ಕಾಪ್ಟರ್‍ನಲ್ಲಿ ಪ್ರಯಾಣಿಕರು ಇರಲಿಲ್ಲ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


