ಮೋದಿ ವಿರುದ್ಧದ ದೂರು ರದ್ದು
ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರೊಬ್ಬರಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ...

Published On :
ಅಹಮದಾಬಾದ್: ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರೊಬ್ಬರಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪದ ದೂರನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.
2014ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಮತದಾನ ಮಾಡಿಬಂದ ನಂತರ ಬಿಜೆಪಿ ಪಕ್ಷದ ಕಮಲ ಚಿಹ್ನೆಯೊಂದಿಗೆ ಮೋದಿ ಸೆಲ್ಫಿ ತೆಗೆದುಕೊಂಡದ್ದನ್ನು ಪ್ರಶ್ನಿಸಿ ಆಪ್ ಕಾರ್ಯಕರ್ತ ದೂರು ಸಲ್ಲಿಸಿದ್ದರು.
ಆಪ್ ಪಕ್ಷದ ನಿಶಾಂತ್ ವರ್ಮಾ ಸ್ಥಳೀಯ ಕೋರ್ಟ್‍ನಲ್ಲಿ ಕಳೆದ ಮೇ ತಿಂಗಳಲ್ಲಿ ದೂರು ಅರ್ಜಿ ಸಲ್ಲಿಸಿದ್ದರು. ಅದನ್ನು ತಿರಸ್ಕೃತಗೊಂಡಾಗ ಹೈಕೋರ್ಟ್‍ಗೆ ಮರು ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಸ್ಥಳೀಯ ಕೋರ್ಟ್‍ನ ತೀರ್ಪನ್ನೇ ಎತ್ತಿಹಿಡಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


