ಮೃತ ರೈತರ ಕುಟುಂಬಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ
ಪಂಜಾಬ್ ನಲ್ಲಿ ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಮೃತ ರೈತನ ಕುಟುಂಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ...

Published On :
ಬತಿಂದ: ಪಂಜಾಬ್ ನಲ್ಲಿ ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಮೃತ ರೈತನ ಕುಟುಂಬಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಭೇಟಿ ನೀಡಿದ್ದಾರೆ.
ಪಂಜಾಬ್ ನಲ್ಲಿರುವ ತಕ್ತ್ ಸಾಹಿಬ್ ಪ್ರದೇಶದ ನಿವಾಸಿ ಜಗದೇವ್ ಸಿಂಗ್ ಅವರು ಬೆಳ ನಾಶವಾಗಿ, ಸಾಲದ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಮೃತ ಜಗದೇವ್ ಸಿಂಗ್ ಮನೆಗೆ ರಾಹುಲ್ ಭೇಟಿ ನೀಡಿದ್ದು, ಪಂಜಾಬ್ ನ ಕಾಂಗ್ರೆಸ್ ಮುಖ್ಯಮಂತ್ರಿ ಪ್ರತಾಪ್ ಸಿಂಗ್ ಬಾಜ್ವಾ ಮತ್ತು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಾಥ್ ನೀಡಿದ್ದಾರೆ.
ಮೃತ ಕುಟುಂಬಕ್ಕೆ ರು.1 ಲಕ್ಷ ಸಹಾಯಧನ ನೀಡಿದ ರಾಹುಲ್, ಕುಟಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ರೈತರ ಸಮಸ್ಯೆಗಳ ಬಗೆ ಹರಿಸುವ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಿನ್ನೆಯಷ್ಟೇ ರಾಹುಲ್ ಗಾಂಧಿ ಅವರು ಪಂಜಾಬ್ ನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದವರ ಕುಟುಂಬಗಳಿಗೆ ಭೇಟಿ ನೀಡಿದ್ದರು. ಇಂದು ರೈತರ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


