ದೇಶ

ಆರ್ ಎಸ್ ಎಸ್ ಹಾಗೂ ಬಿಜೆಪಿಯಿಂದ ಜನತೆಯ ಶಾಂತಿ ಮತ್ತು ಸ್ವಾತಂತ್ರ್ಯ ಹರಣ: ರಾಹುಲ್ ಗಾಂಧಿ

ಆರ್ ಎಸ್ ಎಸ್ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ದೇಶದ ಶಾಂತಿ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ....

ಆರ್ ಎಸ್ ಎಸ್  ಹಾಗೂ ಬಿಜೆಪಿಯಿಂದ ಜನತೆಯ ಶಾಂತಿ ಮತ್ತು ಸ್ವಾತಂತ್ರ್ಯ ಹರಣ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಆರ್ ಎಸ್ ಎಸ್ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ದೇಶದ ಶಾಂತಿ ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕಾಂಗ್ರೆಸ್ ಉಪಧ್ಯಾಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಾಧಾರಣ ಚಿಂತನೆ ದೇಶದ ಜನಕ್ಕೆ ಬೇಕಾಗಿಲ್ಲ. ಸ್ವಾತಂತ್ರ್ಯವಿಲ್ಲದೇ ಶಾಂತಿಯಿಲ್ಲ,  ಬಿಜೆಪಿಯಿಂದ ಜನತೆಯ ಶಾಂತಿ ಮತ್ತು ಸ್ವಾತಂತ್ರ್ಯದ ಹರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದೂ ರಾಷ್ಟ್ರೀಯ ಗುಂಪುಗಳು ನಮ್ಮ ಸ್ವಾತಂತ್ರ್ಯ, ನಮ್ಮ ಹಕ್ಕು ಮತ್ತು ನಮ್ಮ ಪ್ರಜಾಸತ್ತಾತ್ಮಕ ಸ್ಥಾನವನ್ನು ಕಸಿದುಕೊಂಡಿದೆ ಎಂದ ರಾಹುಲ್ ಗಾಂಧಿ  ದೇಶದಲ್ಲಿ ಅಸಹಿಷ್ಣುತೆ ಬೀಜ ಬಿತ್ತಿರುವ ಬಿಜೆಪಿ ಕಳೆದ 18 ತಿಂಗಳಿಂದ ಗಣರಾಜ್ಯದ ಹಕ್ಕನ್ನು ಕಿತ್ತು ಕೊಳ್ಳಲು ತಯಾರಿ ನಡೆಸಿದೆ ಎಂದು ದೂರಿದರು.

ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಹರ್ ಲಾಲ್ ನೆಹರೂ ತುಂಬಾ ಸಹಿಷ್ಣುತೆಯ ವ್ಯಕ್ತಿಯಾಗಿದ್ದರು ಎಂದು ರಾಹುಲ್ ಗಾಂಧಿ ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.