ಬಿ'ಹಾರ' ಗದ್ದುಗೆ: ಸಂಭ್ರಮದಲ್ಲಿ ಮಹಾಮೈತ್ರಿ ಕೂಟ
ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಸಾಕಷ್ಟು ಕುತೂಹಲವನ್ನು ಸೃಷ್ಟಿಸಿದ್ದು, ಮಹಾಮೈತ್ರಿ ಕೂಟವು ಅಧಿಕಾರಕ್ಕೆ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ...

ಪಾಟ್ನ: ಬಹುನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಸಾಕಷ್ಟು ಕುತೂಹಲವನ್ನು ಸೃಷ್ಟಿಸಿದ್ದು, ಮಹಾಮೈತ್ರಿ ಕೂಟವು ಅಧಿಕಾರಕ್ಕೆ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಇಂದು ನಡೆಯುತ್ತಿರುವ ಮತದಾನ ಎಣಿಕೆ ಪ್ರಕ್ರಿಯೆಯು ಸಾಕಷ್ಟು ಕುತೂಹಲವನ್ನು ಸೃಷ್ಟಿಸಿದ್ದು, ಜೆಡಿಯು-ಬಿಜೆಪಿ ನಡುವೆ ಜಟಾಪಟಿ ಆರಂಭವಾಗಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಹಾರ ಗದ್ದುಗೆ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.
ಪ್ರಸ್ತುತ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಜೆಡಿಯು ಹಾಗೂ ಅದರ ಮಿತ್ರ ಪಕ್ಷಗಳು 146 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 90 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದೆ. ಇನ್ನುಳಿದಂತೆ ಇತರ ಪಕ್ಷಗಳು 7 ಸ್ಥಾನಗಳನ್ನು ಪಡೆದುಕೊಂಡಿದೆ.
ಮಹಾ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಸ್ಥಾನಗಳು: 154 (ಜೆಡಿಯು– 68, ಆರ್'ಜೆಡಿ – 70, ಕಾಂಗ್ರೆಸ್ -15, ಇತರೆ -7)
ಎನ್ ಡಿ ಎ ಮುನ್ನಡೆ ಸಾಧಿಸಿರುವ ಸ್ಥಾನಗಳು: 83 (ಬಿಜೆಪಿ– 68, ಎಲ್'ಜೆಪಿ – 9, ಹೆಚ್ಎಎಂ – 3, ಆರ್'ಎಲ್ಎಸ್'ಪಿ – 4)
ಇತರರು: 7
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


