ದೇಶ

ಮತ್ತೆ ಅಧಿಕಾರಕ್ಕೆ ಬರಲಿರುವ ನಿತೀಶ್ ಕುಮಾರ್

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ನೇತೃತ್ವದ ಮಹಾಮೈತ್ರಿ ಕೂಟ ವಿಜಯ ಸಾಧಿಸಿದ್ದು. ಮತ್ತೆ ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ಸ್ಪಷ್ಟವಾಗುತ್ತಿದೆ...

ಮತ್ತೆ ಅಧಿಕಾರಕ್ಕೆ ಬರಲಿರುವ ನಿತೀಶ್ ಕುಮಾರ್
ನಿತೀಶ್ ಕುಮಾರ್ (ಸಂಗ್ರಹ ಚಿತ್ರ)
Published On :

ಪಾಟ್ನ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ನೇತೃತ್ವದ ಮಹಾಮೈತ್ರಿ ಕೂಟ ವಿಜಯ ಸಾಧಿಸಿದ್ದು. ಮತ್ತೆ ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ಸ್ಪಷ್ಟವಾಗುತ್ತಿದೆ.

ಜೆಡಿಯು ಮೈತ್ರಿಕೂಟ ಮುನ್ನಡೆ ಸಾಧಿಸಿರುವುದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಅವರು ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಬಿಹಾರದಲ್ಲಿ ಈಗಾಗಲೇ 4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದ ನಿತೀಶ್ ಕುಮಾರ್ ಅವರು ಈ ಬಾರಿ ಮತ್ತೆ ಮುಖ್ಯಮಂತ್ರಿ ಸ್ಥಾನಕ್ಕೇರಿದರೆ 5ನೇ ಬಾರಿಗೆ ಮುಖ್ಯಮಂತ್ರಿಯಾದಂತಾಗುತ್ತದೆ. ನಿತೀಶ್ ಕುಮಾರ್ ಅವರು ಮೊದಲ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿದ್ದು ಕೇವಲ 7 ದಿನಗಳು ಮಾತ್ರ. ಅದು 2000ರ ಮಾ.3 ರಿಂದ ಮಾ.10 ರ ಅವಧಿಯವರೆಗೆ. ನಂತರ 2ನೇ ಬಾರಿಗೆ 2005ರಿಂದ 2010ರವರೆಗೂ ಎರಡನೇ ಬಾರಿ ಸಿಎಂ ಆಗಿದ್ದರು.

ಆನಂತರ 2010 ರಿಂದ ಮೇ.2014ರವರೆಗೂ 3ನೇ ಬಾರಿಗೆ ಅವಧಿಕಾರಕ್ಕೆ ಬಂದಿದ್ದರು. ಮತ್ತೆ 2015ರಿಂದ ಫೆಬ್ರವರಿಯಲ್ಲಿ 4ನೇ ಬಾರಿಗೆ ಸಿಎಂ ಆಗಿದ್ದರು. ಇದೀಗ ಮತ್ತೆ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟ ಪಕ್ಷವು ಜಯಭೇರಿ ಸಾಧಿಸಿದ್ದು, ನಿತೀಶ್ ಕುಮಾರ್ ಅವರು ಮತ್ತೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.