ದೇಶ

ಬಿಜೆಪಿ ಸೋಲು; ಇದು ಮೋದಿ, ಶಾ ವೈಯಕ್ತಿಕ ಸೋಲು: ಸಿದ್ದರಾಮಯ್ಯ

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕುಗ್ಗುತ್ತಿರುವ ಮೋದಿಯ ಜನಪ್ರಿಯತೆ ಕಾರಣ. ಇದು ಮೋದಿ ಮತ್ತು ಅಮಿತ್ ಶಾ ಅವರ...

ಬಿಜೆಪಿ ಸೋಲು; ಇದು ಮೋದಿ, ಶಾ ವೈಯಕ್ತಿಕ ಸೋಲು: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕುಗ್ಗುತ್ತಿರುವ ಮೋದಿಯ ಜನಪ್ರಿಯತೆ ಕಾರಣ. ಇದು ಮೋದಿ ಮತ್ತು ಅಮಿತ್ ಶಾ ಅವರ ಸ್ಪಷ್ಟ ಸೋಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ಬಿಹಾರ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಬಿಹಾರದ ಜನತೆ ಸೋಲಿಸಿದ್ದು, ಇದು ಜಾತ್ಯತೀತ ಶಕ್ತಿಗಳು ಮತ್ತು ಸಾಮಾಜಿಕ ನ್ಯಾಯಕ್ಕೆ ಸಿಕ್ಕಿರುವ ಜಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ನಿತೀಶ್ ಕುಮಾರ್, ಸೋನಿಯಾ ಗಾಂಧಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ನಿತೀಶ್ ಕುಮಾರ್ ಅವರ ಕ್ಲೀನ್ ಇಮೇಜ್, ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ಜನರು ಅವರಿಗೆ ವೋಟ್ ಮಾಡಿದ್ದಾರೆ. ಮೋದಿ ಕಳೆದ ಲೋಕಸಭೆ ಚುನಾವಣೆಗಳಲ್ಲಿ ನೀಡಿದ್ದ ಭರವಸೆಗಳು ಹುಸಿಯಾಗಿವೆ. ಇದರಿಂದ ಜನತೆಗೆ ಭ್ರಮನಿರಸನವಾಗಿದೆ ಎಂದು ಅಭಿಪ್ರಾಯಪಟ್ಟರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.