ದೇಶ

ಅಡ್ವಾಣಿಗೆ ಜನ್ಮದಿನದ ಶುಭಕೋರಿದ ಪ್ರಧಾನಿ ಮೋದಿ

ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರು ಇಂದು 89ನೆ ವಸಂತಕ್ಕೆ ಪಾದಾರ್ಪಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ...

ಅಡ್ವಾಣಿಗೆ ಜನ್ಮದಿನದ ಶುಭಕೋರಿದ ಪ್ರಧಾನಿ ಮೋದಿ
ನರೇಂದ್ರ ಮೋದಿ-ಎಲ್ ಕೆ ಅಡ್ವಾಣಿ
Published On :
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರು ಇಂದು 89ನೆ ವಸಂತಕ್ಕೆ ಪಾದಾರ್ಪಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಡ್ವಾಣಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 
ಮೋದಿ ಅವರು ಹಿರಿಯ ನಾಯಕನ ನಿವಾಸಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು. ಎಲ್.ಕೆ.ಅಡ್ವಾಣಿ ಅವರು ನಮಗೆಲ್ಲ ಹಿರಿಯರು, ಗುರುಗಳು, ಮಾರ್ಗದರ್ಶಕರು ಆಗಿದ್ದು, ಅವರು ಇನ್ನೂ ನೂರು ವರ್ಷ ಬಾಳಲಿ ಎಂದು ಮೋದಿ ಹಾರೈಸಿದರು. 
ಈ ದೇಶಕ್ಕೆ ಅಡ್ವಾಣಿ ಅವರು ನೀಡಿರುವ ಕೊಡುಗೆ ಅನನ್ಯ, ಅವರ ಅನುಭವ, ಜ್ಞಾನಗಳು ನಮಗೆಲ್ಲ ದಾರಿ ದೀಪವಾಗಲಿ ಎಂದ ಅವರು, ನಾನು ಅಡ್ವಾಣಿಯವರಿಂದ ಬಹಳ ಕಲಿತಿದ್ದೇನೆ. ಅವರೊಬ್ಬ ಒಳ್ಳೆಯ ಗುರು ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.