ವಾಯುಭಾರ ಕುಸಿತ; ತಮಿಳುನಾಡಿನಲ್ಲಿ ಭಾರಿ ಮಳೆ, ಚಂಡಮಾರುತ ಭೀತಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಚಂಡಮಾರುತ ಭೀತಿ ಎದುರಾಗಿದೆ...

Published On :
ಚೆನ್ನೈ/ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಚಂಡಮಾರುತ ಭೀತಿ ಎದುರಾಗಿದೆ.
ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ತಮಿಳುನಾಡಿನಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಸಮುದ್ರದಲ್ಲಿ ಅಲೆಗಳು ಜೋರಾಗಿರುವುದರಿಂದ ಕರಾವಳಿ ಭಾಗದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲೂ ಸಹ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಭಾರಿ ಮಳೆ ಬರುವ ಮುನ್ಸೂಚನೆಗಳಿವೆ.
ಎರಡು ಸಾವು
ಭಾರಿ ಪ್ರಮಾಣದ ಮಳೆಯಿಂದಾಗಿ ತಮಿಳುನಾಡಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


