ದೇಶ

ಛೋಟಾ ರಾಜನ್ ಕೇಸ್‌ಗಳು ಸಿಬಿಐಗೆ ವರ್ಗಾವಣೆ: ಫಡ್ನವಿಸ್

ಮುಂಬೈ ಪೊಲೀಸರ ಸಲಹೆ ಮೇರಗೆ ಭೂಗತ ಪಾತಕಿ ಛೋಟಾ ರಾಜನ್‌ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ...

ಛೋಟಾ ರಾಜನ್ ಕೇಸ್‌ಗಳು ಸಿಬಿಐಗೆ ವರ್ಗಾವಣೆ: ಫಡ್ನವಿಸ್
ದೇವೇಂದ್ರ ಫಡ್ನವಿಸ್
Published On :

ಮುಂಬೈ: ಮುಂಬೈ ಪೊಲೀಸರ ಸಲಹೆ ಮೇರಗೆ ಭೂಗತ ಪಾತಕಿ ಛೋಟಾ ರಾಜನ್‌ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.

ಕೆಲವು ಮುಂಬೈ ಪೊಲೀಸ್ ಅಧಿಕಾರಿಗಳು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಕೈಜೋಡಿಸಿದ್ದಾರೆ ಎಂಬ ಛೋಟಾ ರಾಜನ್ ಆರೋಪದ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗುತ್ತಿದೆ ಎಂಬುದನ್ನು ತಳ್ಳಿಹಾಕಿದ ಮಹಾ ಸಿಎಂ, ಆತನ ಹೇಳಿಕೆಗೆ ನಾವು ಮಹತ್ವ ಕೊಡುವುದಿಲ್ಲ. ನಮ್ಮ ನಿರ್ಧಾರಕ್ಕೂ ಛೋಟಾ ರಾಜನ್ ಹೇಳಿಕೆಗೂ ಸಂಬಂಧವಿಲ್ಲ ಎಂದಿದ್ದಾರೆ.

ಈ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ನಾವು ಮುಂಬೈ ಪೊಲೀಸ್ ಆಯುಕ್ತ ಜಾವೇದ್ ಅಹ್ಮದ್ ಸೇರಿದಂತೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದೆ. ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಪ್ರಕರಣವನ್ನು ಸಿಬಿಐ ವರ್ಗಾಯಿಸುವಂತೆ ಸಲಹೆ ನೀಡಿದರು ಎಂದು ಫಡ್ನವಿಸ್ ತಿಳಿಸಿದರು.

ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಅಕ್ಟೋಬರ್ 25ರಂದು ಇಂಡೋನೇಷ್ಯಾ ಪೊಲೀಸರು ಬಂಧಿಸಿದ್ದು, ಸದ್ಯ ಸಿಬಿಐ ವಶದಲ್ಲಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.