ಬಿಹಾರದಲ್ಲಿ ಮೋದಿ ಪ್ರಚಾರ ಮಾಡಿದ ಕ್ಷೇತ್ರಗಳಲ್ಲೇ ಬಿಜೆಪಿಗೆ ಹೆಚ್ಚು ಸೋಲು
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್ಯಾಲಿ ನಡೆಸಿದ...

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್ಯಾಲಿ ನಡೆಸಿದ ಕ್ಷೇತ್ರಗಳಲ್ಲೇ ಬಿಜೆಪಿ ಅತಿ ಹೆಚ್ಚು ಸೋಲು ಅನುಭವಿಸಿದೆ.
ಆದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರ್ಯಾಲಿ ನಡೆಸಿದ ನಾಲ್ಕು ಕ್ಷೇತ್ರಗಳಲ್ಲೂ ಪಕ್ಷ ಗೆದ್ದಿದೆ. ಅಲ್ಲದೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಚಾರ ಮಾಡಿದ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಪ್ರಧಾನಿ ಮೋದಿ ಅವರು ಅಕ್ಟೋಬರ್ 2ರಿಂದ ನವೆಂಬರ್ 2ರವರೆಗೆ ಒಟ್ಟು 26 ಚುನಾವಣಾ ರ್ಯಾಲಿಗಳನ್ನು ನಡೆಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿಯೊಬ್ಬರು ಇಷ್ಟೊಂದು ಚುನಾವಣಾ ರ್ಯಾಲಿ ನಡೆಸಿದ್ದು ಇದೇ ಮೊದಲು.
ಮೋದಿ ಅವರು ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಮುನ್ನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ನಾಲ್ಕು ರ್ಯಾಲಿಗಳನ್ನು ನಡೆಸಿದ್ದರು.
ಪ್ರಧಾನಿಯವರು ಪ್ರಚಾರ ಮಾಡಿದ 26 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಮತ್ತು 16 ಸ್ಥಾನಗಳನ್ನು ಕಳೆದುಕೊಂಡಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


